BREAKING NEWS – ಶಿವಮೊಗ್ಗದಲ್ಲಿ ಬ್ಯಾಟ್‌ನಿಂದ ಹೊಡೆದು ವ್ಯಕ್ತಿ ಹತ್ಯೆ, ಎಸ್.ಪಿ ಹೇಳಿದ್ದೇನು?

SHIVAMOGGA LIVE NEW S | 20 APRIL 2024 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಕೌಟುಂಬಿಕ ವಿಚಾರವಾಗಿ ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯೊಬ್ಬನನ್ನ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ನಗರದ ಬಾಪೂಜಿನಗರದ ಆದಿಪರಾಶಕ್ತಿ ಗಂಗಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ.

ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು , ಮೃತದೇಹವನ್ನು ಮೆಗ್ಗಾನ್ ಶವಗಾರಕ್ಕೆ ರವಾನಿಸಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಘಟನೆ ಬಗ್ಗೆ ಎಸ್ ಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದು  ಮೃತ ವ್ಯಕ್ತಿಯನ್ನ ಸುರೇಶ್ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣಗಳಿಗೆ ಘಟನೆ ನಡೆದಿದ್ದು ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ .

ಇದನ್ನೂ ಓದಿ – ಶಿವಮೊಗ್ಗ ಸಿಟಿಯ ವಿವಿಧೆಡೆ ಏ.21ರಂದ ಅರ್ಧ ದಿನ ಕರೆಂಟ್‌ ಇರಲ್ಲ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment