ಶಿವಮೊಗ್ಗದಲ್ಲಿ 48 ಗಂಟೆ ಮೊದಲೇ ನಿಷೇಧಾಜ್ಞೆ ಜಾರಿ, ಜಿಲ್ಲಾಧಿಕಾರಿ ಆದೇಶ

SHIVAMOGGA LIVE NEWS | 23 APRIL 2024

ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳ ಸುತ್ತಲು 200 ಮೀಟರ್‌ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಮತದಾನ ಆರಂಭಕ್ಕೂ 48 ಗಂಟೆ ಮೊದಲು ನಿಷೇಧಾಜ್ಞೆ ಜಾರಿಗೆ ಬರಲಿದೆ. ಮೇ.5ರಂದು ಸಂಜೆ 6 ಗಂಟೆಯಿಂದ ಮೇ 7ರಂದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಚುನಾವಣೆಗೆ ಜೊಮ್ಯಾಟೋ ಡೆಲಿವರಿ ಬಾಯ್‌, ಡ್ರೈವರ್‌, ಕೂಲಿ ಕಾರ್ಮಿಕ ಸ್ಪರ್ಧೆ, ಇಲ್ಲಿದೆ ಅಭ್ಯರ್ಥಿಗಳ ಹಿನ್ನೆಲೆ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment