ಭದ್ರಾವತಿಯಲ್ಲಿ ಪೊಲೀಸ್‌ ರೇಡ್‌, ಮಹಿಳೆ ಅರೆಸ್ಟ್‌, ಲಕ್ಷ ಲಕ್ಷದ ಮಾದಕ ವಸ್ತು ಸೀಜ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 APRIL 2024

BHADRAVATHI : ಸತ್ಯ ಸಾಯಿ ನಗರದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಆತನಿಂದ 4.50 ಲಕ್ಷ ರೂ. ಮೌಲ್ಯದ 7.590 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಸತ್ಯ ಸಾಯಿ ನಗರದ ಹುಸೇನ್‌ ಬಿ (35) ಎಂಬಾಕೆಯನ್ನು ಬಂಧಿಸಲಾಗಿದೆ. ಗಾಂಜಾ ಸಾಗಣೆ ಮಾಡುತ್ತಿರುವ ಮಾಹಿತಿ ಹಿನ್ನೆಲೆ ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿದರು. ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ಇನ್ಸ್‌ಪೆಕ್ಟರ್ ಶ್ರೀಶೈಲ ಕುಮಾರ್, ಪಿಎಸ್‌ಐ ಕೃಷ್ಣ ಕುಮಾರ್ ಬಿ, ಹೊಸಮನೆ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ಪವರ್‌ ಕಟ್‌ ಆಗಲಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment