ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್‌ 2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 APRIL 2024

SHIMOGA : ಜಮೀನಿನ ಖಾತೆ ಮಾಡಿಕೊಡಲು 15 ಸಾವಿರ ರೂ. ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಗ್ರೇಡ್‌ 2 ಕಾರ್ಯದರ್ಶಿ ಯೋಗೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಣವನ್ನು ವಶಕ್ಕೆ ಪಡೆದು ಯೋಗೇಶ್‌ನನ್ನು ಬಂಧಿಸಲಾಗಿದೆ.

ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ?

yogesh, Abbalagereನವುಲೆಯ ಯಶವಂತ ಎಂಬುವವರು ಚನ್ನಮುಂಭಾಪುರದಲ್ಲಿರುವ ಜಮೀನಿಗೆ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ 15 ಸಾವಿರ ರೂ. ಲಂಚದ ಹಣಕ್ಕೆ ಯೋಗೇಶ್‌ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇವತ್ತು ಯಶವಂತ್‌ ಅವರಿಂದ ಹಣ ಪಡೆಯುತ್ತಿದ್ದಾಗ ಗ್ರೇಡ್‌ 2 ಕಾರ್ಯದರ್ಶಿ ಯೋಗೇಶ್‌ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತ ಎಸ್‌ಪಿ ಮಂಜುನಾಥ್‌, ಡಿವೈಎಸ್‌ಪಿ ಉಮೇಶ್‌ ಈಶ್ವರನಾಯ್ಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್. ಕುಸಲಾಪುರ, ಪ್ರಕಾಶ್, ಹೆಚ್.ಎಸ್.ಸುರೇಶ್, ಸಿಬ್ಬಂದಿ ಯೋಗೇಶ್, ಸುರೇಂದ್ರ ಹೆಚ್.ಜಿ, ಪ್ರಶಾಂತ್ ಕುಮಾರ್, ರಘುನಾಯ್ಕ, ದೇವರಾಜ್, ಪುಟ್ಟಮ್ಮ ಎನ್., ಪ್ರದೀಪ್, ಗೋಪಿ ವಿ., ಜಯಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಬ್ಯಾಂಕ್‌ಗೆ ನುಗ್ಗಿದ ಕಳ್ಳರು, ಸ್ಟ್ರಾಂಗ್‌ ರೂಂ ಲಾಕ್‌ ತೆಗೆಯಲು ಯತ್ನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment