ಶಿವಮೊಗ್ಗ ಲೋಕಸಭೆಗೆ ಮತದಾನ ಶುರು, ಮನೆಯಲ್ಲೆ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ವಿಶೇಷ ಚೇತನರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಮನೆಯಿಂದಲೇ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ನಗರದ ಮೂವರು ಮತದಾರರು ಇವತ್ತು ಪೋಸ್ಟಲ್‌ ಬ್ಯಾಲೆಟ್‌ ಮೂಲಕ ತಮ್ಮ ಹಕ್ಕು ಚಲಾಯಿಸಿದರು.

ಮನೆಗೆ ತೆರಳಿ ಮತ ಪಡೆದ ಅಧಿಕಾರಿಗಳು

ಶರಾವತಿ ನಗರದ 91 ವರ್ಷದ ಚಂದ್ರಶೇಖರಪ್ಪ, ಕೋಟೆ ರಸ್ತೆಯ 90 ವರ್ಷದ ಅನ್ನಪೂರ್ಣಮ್ಮ ಹಾಗೂ ಹೊಸಮನೆಯ ವಿಶೇಷ ಚೇತನ ಮತದಾರರ ಹನುಮಂತರಾಯಪ್ಪ ಅಂಚೆ ಮತದಾನ ಮಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರು ಮತದಾರರಿಗೆ ಹೂಗುಚ್ಛ ನೀಡಿದರು. ಚುನವಣಾ ಅಧಿಕಾರಿಗಳು ಈ ಸಂದರ್ಭ ಇದ್ದರು.

ನೋಂದಾಯಿತರಿಗೆ ಮನೆಯಿಂದಲೇ ಮತದಾನ

ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಲು ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಕಷ್ಟವಾಗಲಿದೆ. ಈ ಹಿನ್ನೆಲೆ ಚುನಾವಣಾ ಆಯೋಗ ಇಂತಹ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಿದೆ. ನೋಂದಾಯಿಸಿಕೊಂಡ ಮತದಾರರಿಗೆ ಚುನಾವಣ ಅಧಿಕಾರಿಗಳೆ ಮನೆಗೆ ತೆರಳಿ ಮತದಾನ ಮಾಡಿಸಿಕೊಳ್ಳುತ್ತಾರೆ. ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 2,515 ಹಿರಿಯ ನಾಗರಿಕರು, 1,064 ವಿಶೇಷ ಚೇತನರು ಮನೆಯಿಂದಲೇ ಮತದಾನ ಮಾಡಲಿದ್ದಾರೆ.

ಯಾವ್ಯಾವಾ ಕ್ಷೇತ್ರದಲ್ಲಿ ಎಷ್ಟಿದ್ದಾರೆ?

ಶಿವಮೊಗ್ಗ ಗ್ರಾಮಾಂತರದಲ್ಲಿ 124 ಹಿರಿಯ ನಾಗರಿಕರು, 76 ವಿಶೇಷ ಚೇತನರು, ಭದ್ರಾವತಿಯಲ್ಲಿ 172 ಹಿರಿಯ ನಾಗರಿಕರು, 70 ವಿಶೇಷ ಚೇತನರು, ಶಿವಮೊಗ್ಗ ನಗರದಲ್ಲಿ 237 ಹಿರಿಯ ನಾಗರಿಕರು, 64 ವಿಶೇಷ ಚೇತನರು, ತೀರ್ಥಹಳ್ಳಿಯಲ್ಲಿ 356 ಹಿರಿಯ ನಾಗರಿಕರು,  150 ವಿಶೇಷ ಚೇತನರು, ಶಿಕಾರಿಪುರದಲ್ಲಿ 126 ಹಿರಿಯ ನಾಗರಿಕರು, 88 ವಿಶೇಷ ಚೇತನರು, ಸೊರಬದಲ್ಲಿ 242 ಹಿರಿಯ ನಾಗರಿಕರು, 140 ವಿಶೇಷ ಚೇತನರು, ಸಾಗರದಲ್ಲಿ 363 ಹಿರಿಯ ನಾಗರಿಕರು, 179 ವಿಶೇಷ ಚೇತನರು, ಬೈಂದೂರುದಲ್ಲಿ 895 ಹಿರಿಯ ನಾಗರಿಕರು, 297 ವಿಶೇಷ ಚೇತನರು ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ – ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್‌ 2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment