ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 APRIL 2024
SHIMOGA : ಪಾರ್ಟ್ ಟೈಮ್ ಉದ್ಯೋಗ ಕೊಡುವ ನೆಪದಲ್ಲಿ ಆನ್‌ಲೈನ್ ಮೂಲಕ ವಂಚನೆ ಮುಂದುವರೆದಿದೆ. ಉದ್ಯೋಗ ಆಕಾಂಕ್ಷಿಗಳು ಲಕ್ಷಾಂತರ ರೂ. ಕಳೆದುಕೊಳ್ಳುತ್ತಿದ್ದಾರೆ. ಇಂತಹ ಮತ್ತೊಂದು ಪ್ರಕರಣ ವರದಿಯಾಗಿದೆ.
ವಿದ್ಯಾಭ್ಯಾಸಕ್ಕೆ ತಕ್ಕ ಉದ್ಯೋಗ ಕೊಡುವುದಾಗಿ ಟೆಲಿಗ್ರಾಂನಲ್ಲಿ ಬಂದ ಮೆಸೇಜ್ ನಂಬಿ ಶಿವಮೊಗ್ಗದ ಮಹಿಳೆಯೊಬ್ಬರು (ಹೆಸರು ಗೌಪ್ಯ) ಲಕ್ಷಾಂತರ ರೂ. ಹಣ ಕಳೆದುಕೊಂಡಿದ್ದಾರೆ. ಏ.3ರಂದು ಶಿವಮೊಗ್ಗದ ಮಹಿಳೆಗೆ ಟೆಲಿಗ್ರಾಂನಲ್ಲಿ ಮೆಸೇಜ್ ಬಂದಿತ್ತು. ಹೊಟೇಲ್ ಒಂದರ ವೆಬ್‌ಸೈಟ್ ಲಿಂಕ್ ಕಳುಹಿಸಿ ಪ್ರಮೋಟ್ ಮಾಡುವಂತೆ ಸೂಚಿಸಲಾಯಿತು. ಇದಕ್ಕೆ 700 ರೂ. ಹಣವನ್ನ ಮಹಿಳೆಯ ಖಾತೆಗೆ ವರ್ಗಾಯಿಸಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಲಕ್ಷ ಲಕ್ಷ ನುಂಗಿದ ವಂಚಕರು
ಟಾಸ್ಕ್‌ಗಳನ್ನ ಪೂರೈಸಿ ಹೆಚ್ಚು ಹಣ ಸಾಂಪಾದಿಸಬಹುದು. ಟಾಸ್ಕ್‌ಗಳಿಗೆ ಹಣ ಪಾವತಿಸಬೇಕು ಎಂದು ಸೂಚಿಸಲಾಗಿತ್ತು. ಅದರಂತೆ ಶಿವಮೊಗ್ಗದ ಮಹಿಳೆ ವಿವಿಧ ಹಂತದಲ್ಲಿ 11.82 ಲಕ್ಷ ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಸ್ನೇಹಿತರು, ಪರಿಚಿತರಿಗೆ ವಿಷಯ ತಿಳಿಸಿದ್ದರು. ವಂಚನೆಗೊಳಗಾದ ಅರಿವಾಗುತ್ತಿದ್ದಂತೆ ಮಹಿಳೆ ದೂರು ನೀಡಿದ್ದಾರೆ. ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಾಜನೂರಿನಲ್ಲಿ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಸ್ಪೋಟ, ಕಾರಣವೇನು?
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















