ಗೋಪಿ ಸರ್ಕಲ್‌ನಲ್ಲಿ ಪಂಜು ಹಿಡಿದು ವಿಜಯೇಂದ್ರ ವಿರುದ್ಧ ಆಕ್ರೋಶ, ಕ್ಷಮೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 APRIL 2024

SHIMOGA : ಸಚಿವ ಸಂತೋಷ್‌ ಲಾಡ್‌ ಅವರಿಗೆ ಅವಹೇಳನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಮರಾಠ ಸಮುದಾಯ ಮತ್ತು ಅಹಿಂದ ಸಮಾಜದ ವತಿಯಿಂದ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು. ನಗರದ ಗೋಪಿ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.

ಬಿ.ವೈ.ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಂದೆಯ ಹೆಸರಿಟ್ಟುಕೊಂಡು ವಿಜಯೇಂದ್ರ ರಾಜಕಾರಣ ಮಾಡುತ್ತಿದ್ದಾರೆ. ಅವರು ಸಂತೋಷ್‌ ಲಾಡ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೂಡಲೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ವಿಜಯೇಂದ್ರಗೆ ನೈತಿಕತೆ ಇಲ್ಲ

praveen youth congress shimogaತಂದೆ ಯಡಿಯೂರಪ್ಪ ಅವರ ಹೆಸರು ಇಲ್ಲದಿದ್ದರೆ ವಿಜಯೇಂದ್ರ ಅವರಿಗೆ ರಾಜಕಾರಣದಲ್ಲಿ ಕಿಮ್ಮತ್ತಿಲ್ಲ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಕುರಿತು ಮಾತನಾಡಲು ವಿಜಯೇಂದ್ರ ಅವರಿಗೆ ನೈತಿಕತೆ ಇಲ್ಲ. ಸಾವಿರಾರು ಬಡವರು, ವಿದ್ಯಾರ್ಥಿಗಳಿಗೆ ಸಂತೋಷ್‌ ಲಾಡ್‌ ನೆರವಾಗಿದ್ದಾರೆ. ಜನರೆ ಬಯಸಿ ಬೆಳೆಸಿದ ನಾಯಕ. ವಿಜಯೇಂದ್ರ ಅವರ ಟೀಕೆಗೆ ಶ್ರಮಿಕರು, ಬಡವರು, ವಿದ್ಯಾರ್ಥಿಗಳು ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮರಾಠ ಸಮಾಜದ ಮುಖಂಡ ಎಂ.ಪ್ರವೀಣ್‌ ಕುಮಾರ್‌ ಟೀಕಿಸಿದ್ದಾರೆ.

ಪ್ರತಿಭಟನೆಯಲ್ಲಿ ಮರಾಠ ಸಮುದಾಯದ ಪ್ರಮುಖರಾದ ಡಾ. ತಾನಾಜಿ ಸಚಿನ್ ರಾವ್ ಸಿಂದೆ, ಲೋಕೇಶ್ ರಾವ್, ದಿನೇಶ್ ರಾವ್, ಎಂ.ಬಿ.ಕವಿತಾ, ಕಿರಣ್ ಮೋರೆ, ಅಶೋಕ್ ರಾವ್ ಘೋರ್ಪಡೆ, ಪ್ರಶಾಂತ್ ರಾಯ್,  ಜಿಎನ್ ಪರಶುರಾಮ್, ಪುನೀತ್ ರಾವ್, ಪುನೀತ್ ರಾವ್, ಅಹಿಂದ ಸಮಾಜಗಳ ಪ್ರಮುಖರಾದ ಹೆಚ್.ಸಿ.ಯೋಗೀಶ್, ರೇಖಾ ರಂಗನಾಥ್, ನಾಗರಾಜ್ ಕಂಕಾರಿ, ಚಂದ್ರಭೂಪಾಲ್, ಕೆ ರಂಗನಾಥ್, ಶರತ್, ಕಲೀಮ್ ಪಾಷಾ, ಎನ್.ಕೆ.ಶ್ಯಾಮಸುಂದರ್, ಶಿವಣ್ಣ , ಕುಮರೇಶ್, ಭಾಸ್ಕರ್, ಎಚ್‌ಪಿ ಗಿರೀಶ್ ವಿನಯ್ , ಲೋಕೇಶ್ ,  ಪವನ್ , ರಾಕೇಶ್, ಸುವರ್ಣ ನಾಗರಾಜ್ , ಸೌಗಂಧಿಕಾ , ಚಂದ್ರಕಲಾ, ಸ್ಟೆಲ್ಲಾ ಮಾರ್ಟಿನ್, ಸಂತೋಷ್ ಲಾಡ್ ಅಭಿಮಾನಿಗಳು ಉಪಸ್ಥಿತರಿದ್ದರು. 

ಇದನ್ನೂ ಓದಿ – ಕೆಲಸ ಹುಡುಕ್ತಿರೋರೆ ಹುಷಾರ್‌, ಯಾಮಾರಿದ್ರೆ ಶಿವಮೊಗ್ಗದ ಮಹಿಳೆಗಾದ ಸ್ಥಿತಿ ನಿಮಗೂ ಫಿಕ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 26, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment