ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 APRIL 2024
ELECTION NEWS : ಮೈತ್ರಿ ಪಕ್ಷ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದರು. ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿಯಲ್ಲಿ ಮಾಜಿ ಸಿಎಂ ಪ್ರಚಾರ ಕೈಗೊಂಡರು. ಶಿವಮೊಗ್ಗಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಎಲ್ಲಿಗೆಲ್ಲ ಭೇಟಿ ನೀಡಿದರು, ಹೇಗಿತ್ತು ಪ್ರಚಾರ? ಇಲ್ಲಿದೆ ಫಟಾಫಟ್ ಅಪ್‌ಡೇಟ್.
SHIMOGA : ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೆಬೇಕು. ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಪಕ್ಷಕ್ಕೆ ಮಾತ್ರವಲ್ಲದೆ ಇಡೀ ಸಮಾಜವೇ ತಲೆ ತಗ್ಗಿಸುವಂತಹದ್ದು. ಪ್ರಜ್ವಲ್ ರೇವಣ್ಣ ಉಚ್ಚಾಟನೆಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ತೀರ್ಮಾನಿಸಲಿದ್ದಾರೆ ಎಂದರು. ಇನ್ನು, ಕಾಂಗ್ರೆಸ್‌ನವರಿಗೆ ಖಾಲಿ ಚೊಂಬು ಪ್ರಿಯವಾಗಿದೆ. ರಾಜ್ಯದಲ್ಲಿ ಖಜಾನೆ ಖಾಲಿಯಾಗಿದೆ. ಚೊಂಬು ಅದನ್ನೆ ಸೂಚಿಸುತ್ತದೆ ಎಂದು ಲೇವಡಿ ಮಾಡಿದರು.ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ
ಕೋಣಂದೂರಿನಲ್ಲಿ ಬಹಿರಂಗ ಪ್ರಚಾರ
THIRTHAHALLI : ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ತೀರ್ಥಹಳ್ಳಿ ತಾಲೂಕು ಕೋಣಂದೂರಿನಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ‘ರಾಜ್ಯ ಸರ್ಕಾರ ರಚನೆಯಾಗಿ 11 ತಿಂಗಳು ಕಳೆದರೂ ಅಭಿವೃದ್ಧಿಗಾಗಿ ಒಂದು ಪೈಸೆಯನ್ನೂ ಕೊಡಲಿಲ್ಲ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವುದು ಇವರ ಸಾಧನೆ. ಅಭಿವೃದ್ಧಿ ಕಾರ್ಯಕ್ರಮ ರೂಪಿಸದೆ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ. ಸಾಲ ಮಾಡಿದ್ದೆ ಕಾಂಗ್ರೆಸ್ ಪಕ್ಷದ ಸಾಧನೆ. ದಲಿತರಿಗೆ ಮೀಸಲಿದ್ದ ಹಣವನ್ನು ಗ್ಯಾರಂಟಿಗಳಿಗೆ ವಿನಿಯೋಗಿಸಿದ್ದಾರೆ ಎಂದು ಆರೋಪಿಸಿದರು.
SHIMOGA : ಸಾಗರ ರಸ್ತೆಯಲ್ಲಿ ಪಿಎಸ್‌ಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೇರಣ ಸಭಾಂಗಣದಲ್ಲಿ ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ‘ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಆದರು ನಿಗಮ, ಮಂಡಳಿಗೆ, ಗ್ಯಾರಂಟಿ ಅನುಷ್ಠಾನ ಸಮಿತಿಗೆ ಅಧ್ಯಕ್ಷರನ್ನು ನೇಮಿಸಿ ದುಂದುವೆಚ್ಚ ಮಾಡುತ್ತಿದೆ’ ಎಂದು ಆರೋಪಿಸಿದರು.ಶಿವಮೊಗ್ಗದಲ್ಲಿ ಕಾರ್ಯಕರ್ತರ ಸಭೆ
ಯುವ ಜೆಡಿಎಸ್ ಕಚೇರಿ ಉದ್ಘಾಟನೆ
SHIMOGA : ಜಿಲ್ಲಾ ಯುವ ಜನತಾದಳ ಕಚೇರಿಯನ್ನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು. ಯುವ ಜನತಾದಳ ಜಿಲ್ಲಾಧ್ಯಕ್ಷ ಮಧು ಕುಮಾರ್, ಕಾರ್ಯಧ್ಯಕ್ಷ ಎಸ್.ಎಲ್.ನಿಖಿಲ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಲ್ ಗೋಪಾಲ್, ಕಾರ್ಯಧ್ಯಕ್ಷ ದಾದಾಪೀರ್, ರಾಮಕೃಷ್ಣ, ಶಾಸಕಿ ಶಾರದಾ ಪುರ್ಯನಾಯ್ಕ್, ಭದ್ರಾವತಿಯ ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿ ಗೌಡ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಇದ್ದರು.
ಇದನ್ನೂ ಓದಿ – ಈಶ್ವರಪ್ಪ ಪುತ್ರ, ಮಾಜಿ ಮೇಯರ್ ಸೇರಿ 10 ಮಂದಿ ಬಜೆಪಿಯಿಂದ ಉಚ್ಛಾಟನೆಗೆ ಶಿಫಾರಸು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422