ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 APRIL 2024
ELECTION NEWS : ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಗೆ ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಬೆಂಬಲ ನೀಡಿದ್ದಾರೆ. ಇವತ್ತು ಈಶ್ವರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ, ಈಶ್ವರಪ್ಪ ಅವರಿಗೆ ಬೆಂಬಲ ನೀಡಲು ಕಾರಣ ಸ್ಪಷ್ಟಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀ.ನಾ.ಶ್ರೀ ಬೆಂಬಲಕ್ಕೆ 2 ಕಾರಣ
ಶರಾವತಿ ಸಂತ್ರಸ್ತರು, ಬಗರ್ ಹುಕುಂ, ಮಲೆನಾಡು ರೈತರ ಸಮಸ್ಯೆಗಳನ್ನು ಯಾವ ಸರ್ಕಾರಗಳು ಬಗೆಹರಿಸಿಲ್ಲ. ಸಂಸದರಾಗಿದ್ದ ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಈ ಕುರಿತು ಸಂಸತ್ತಿನಲ್ಲಿ ಪ್ರಶ್ನಿಸಲಿಲ್ಲ. ಕಾಂಗ್ರೆಸ್ ಸರ್ಕಾರವು ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದೆ. ಇದೇ ಕಾರಣಕ್ಕೆ ಮಲೆನಾಡು ರೈತ ಹೋರಾಟ ಸಮಿತಿ ಸ್ವತಂತ್ರ ಅಭ್ಯರ್ಥಿ ಈಶ್ವರಪ್ಪಗೆ ಬೆಂಬಲ ಘೋಷಿಸುತ್ತಿದೆ.
ಮಾಜಿ ಮುಖ್ಯಮಂತ್ರಿಗಳ ಮಕ್ಕಳಷ್ಟೆ ಚುನಾವಣೆಗೆ ಸ್ಪರ್ಧಿಸಬೇಕ? ಇದು ಕುಟುಂಬ ರಾಜಕಾರಣವಲ್ಲವೆ? ಹಿಂದುಳಿದ ವರ್ಗಗಳ ಪರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಏನನ್ನೂ ಮಾಡಿಲ್ಲ. ಹಿಂದುಳಿದ ವರ್ಗದ ನಾಯಕರಾಗಿರುವ ಈಶ್ವರಪ್ಪ ಅವರಿಗೆ ಖಂಡಿತ ನ್ಯಾಯ ದೊರೆಯಲಿದೆ. ಈ ಬಾರಿ ಈಶ್ವರಪ್ಪ ಗೆಲುವು ಸಾಧಿಸುತ್ತಾರೆ.
‘ರಾಯಣ್ಣ ಬ್ರಿಗೇಡ್ ಇರಬೇಕಿತ್ತು’
ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿದ್ದೆ. ಯಡಿಯೂರಪ್ಪ ಅವರ ದುರಾಲೋಚನೆಯಿಂದ ಅದು ನಿಂತಿತು. ಈಗ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಇದ್ದಿದ್ದರೆ ಚನ್ನಾಗಿರುತ್ತಿತ್ತು. ಚುನಾವಣೆಯಲ್ಲಿ ಗೆದ್ದು ಭೂ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ರೈತರ ಜೊತೆ ನಿಲ್ಲುತ್ತೇನೆ. ಹಿಂದುಳಿದವರು, ದಲಿತರಿಗೆ ನ್ಯಾಯ ಒದಗಿಸಲು ದೊಡ್ಡ ಸಂಸ್ಥೆ ಸ್ಥಾಪಿಸುತ್ತೇನೆ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಚಿವ ಸಂತೋಷ್ ಲಾಡ್, ವಾರ್ ರೂಂಗೆ ಭೇಟಿ, ಏನೆಲ್ಲ ಹೇಳಿದರು? ಇಲ್ಲಿದೆ 5 ಪಾಯಿಂಟ್