ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 MAY 2024
ELECTION NEWS : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ಚರ್ಚೆ ಜೋರಾಗಿದೆ. ಈ ಮಧ್ಯೆ ಶಿವಮೊಗ್ಗ ಲೋಕಸಭೆ ಚುನಾವಣೆಯ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್, ತಮ್ಮ ವಿರುದ್ಧ ಮಾಧ್ಯಮಗಳು ಮಾನಹಾನಿ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
50 ಮಾಧ್ಯಮಗಳ ಹೆಸರು
ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ದೃಶ್ಯ, ಪತ್ರಿಕೆ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಮಾನಹಾನಿಕರ ಸುದ್ದಿ, ಫೋಟೊ ಪ್ರಕಟಿಸದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ. 50 ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶರು, ಕೆ.ಇ.ಕಾಂತೇಶ್ ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಏಪ್ರಿಲ್ 27ರಂದು ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದ್ದಾರೆ.
ಕಾಂತೇಶ್ ಅವರ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸದ್ಯ ಈ ಬೆಳವಣಿಗೆ ಶಿವಮೊಗ್ಗ ರಾಜಕಾರಣ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಚರ್ಚೆಗು ಕಾರಣವಾಗಿದೆ.
ಇದನ್ನೂ ಓದಿ – ಈಶ್ವರಪ್ಪಗೆ ಬೆಂಬಲ ಘೋಷಿಸಿದ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ, ರಾಯಣ್ಣ ಬ್ರಿಗೇಡ್ ಸ್ಮರಿಸಿದ ಈಶ್ವರಪ್ಪ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





