ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ ನಿಂತು ಭಾಷಣ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 MAY 2024

ELECTION NEWS : ಅನುಮತಿ ಇದ್ದರೂ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ನಡೆಸಲು ಅಡ್ಡಿ ಉಂಟು ಮಾಡಲಾಗಿದೆ. ಏಕಾಏಕಿ ವೇದಿಕೆ ತೆರವು ಮಾಡಲಾಗಿದೆ. ಇದರಿಂದ ಕೆಂಡಾಮಂಡಲರಾದ ಈಶ್ವರಪ್ಪ, ನಡು ರಸ್ತೆಯಲ್ಲೇ ನಿಂತು ಆಕ್ರೋಶ ವ್ಯಕ್ತಪಡಿಸಿದರು.

ಶಿರಾಳಕೊಪ್ಪದ ಸೊರಬ ರಸ್ತೆಯ ಮೈಲಾರ ಲಿಂಗೇಶ್ವರ ದೇವಸ್ಥಾನದ ಬಳಿ ಇವತ್ತು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ಆಯೋಜಿಸಲಾಗಿತ್ತು. ಚುನಾವಣ ಆಯೋಗದಿಂದ ಅನುಮತಿಯನ್ನು ಪಡೆಯಲಾಗಿತ್ತು. ಆದರೂ ಕೆಲವರು ವೇದಿಕೆ ಮತ್ತು ಮೈಕ್‌ಗಳನ್ನು ಒತ್ತಾಯಪೂರ್ವಕವಾಗಿ ತೆರವು ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ‍ಶ್ವರಪ್ಪ ಅವರು ಸಭೆ ನಿಗದಿಯಾಗಿದ್ದ ಸ್ಥಳಕ್ಕೆ ಬಂದಾಗ ವಿಷಯ ತಿಳಿದು ಕೆಂಡಾಮಂಡಲವಾದರು.

ನಡುರಸ್ತೆಯಲ್ಲೇ ನಿಂತು ಭಾಷಣ, ಆಕ್ರೋಶ

ವೇದಿಕೆ ಇರದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಡು ರಸ್ತೆಯಲ್ಲೆ ತೆರದ ವಾಹನದಲ್ಲಿ ನಿಂತು ಸಭೆ ನಡೆಸಿದರು. ಕಾರ್ಯಕರ್ತರು ಚೇರುಗಳನ್ನು ಎಳೆದು ತಂದು ರಸ್ತೆ, ಪಕ್ಕದ ಖಾಲಿ ಜಾಗದಲ್ಲಿ ಕುಳಿತು ಭಾಷಣ ಕೇಳಿದರು.

ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್‌ ಮತ್ತು ಯಡಿಯೂರಪ್ಪ ಅವರ ಕಡೆಯವರು ಹೊಂದಾಣಿಕೆ ಮಾಡಿಕೊಂಡು ವೇದಿಕೆ ತೆರವು ಮಾಡಿಸಿರಬಹುದು. ಚುನಾವಣೆಯಲ್ಲಿ ಗೆದ್ದು ಇದೇ ಜಾಗಕ್ಕೆ ಬಂದು ಈಗ ಭಾಷಣ ಕೇಳುತ್ತಿರುವವರನ್ನು ಸನ್ಮಾನಿಸುತ್ತೇನೆ. ಇನ್ನೊಮ್ಮೆ ನನ್ನ ಕಾರ್ಯಕ್ರಮಗಳಿಗೆ ತೊಂದರೆ ಕೊಟ್ಟರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಷ್ಟೊತ್ತಿಗೆ ಬರ್ತಾರೆ? ಎಲ್ಲಿಗೆಲ್ಲ ಭೇಟಿ ನೀಡ್ತಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2024

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

Leave a Comment