ಕುಡುಮಲ್ಲಿಗೆ ಬಳಿ ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 MAY 2024

THIRTHAHALLI : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಲಾಂ ಸಾಬ್ ಎಂಬುವರನ್ನು ದಾವಣಗೆರೆಯಿಂದ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲು ಇಕೋ ಕಾರಿನಲ್ಲಿ  ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕುಡುಮಲ್ಲಿಗೆ ಬಳಿ ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಇಕೋ ಕಾರು ಡಿಕ್ಕಿಯಾಗಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್‌, ಹೇಗಿದೆ ಭದ್ರತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2024

Leave a Comment