ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 MAY 2024
ELECTION NEWS : ಮತದಾನ ಜಾಗೃತಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಾಂಪ್ರದಾಯಿಕ ಉಡುಪು ಧರಿಸಿ ನಗರದಲ್ಲಿ ಮೆರವಣಿಗೆ ನಡೆಸಿದರು. ಫ್ರೀಡಂ ಪಾರ್ಕ್‌ನಿಂದ ಆರಂಭವಾದ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿತು.
ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು
ವಿವಿಧ ಇಲಾಖೆಯ ಸಿಬ್ಬಂದಿ ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು ಧರಿಸಿದ್ದರು. ಮಹಿಳೆಯರು ಸೀರೆ, ಪುರುಷರು ಪಂಚೆ ಶಲ್ಯ ಧರಿಸಿದ್ದರು. ಬಂಜಾರ ಸಮುದಾಯದ ಸಾಂಸ್ಕೃತಿಕ ಉಡುಗೆ, ಅಡಿಕೆ ಟೋಪಿ, ಗಾಂಧಿ ಟೋಪಿ, ಖಾದಿ ವಸ್ತ್ರ, ಯಕ್ಷಗಾನ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆಯ ಹಾದಿ ಉದ್ದಕ್ಕೂ ಕಡ್ಡಾಯ ಮತದಾನದ ಘೋಷಣೆ ಕೂಗಿದರು.
ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಸಾಂಪ್ರದಾಯಿಕ ಉಡುಗೆ ತೊಟ್ಟು ಮತದಾರರಲ್ಲಿ ಜಾಗೃತಿ ಮೂಡಿಸುತ್ತಿರುವುದು ಸಂತೋಷದ ವಿಚಾರ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ದೇಶದ ಏಳಿಗೆಗೆ ಸಹಕಾರ ನೀಡಬೇಕು.ಸ್ನೇಹಲ್ ಸುಧಾಕರ್ ಲೋಖಂಡೆ, ಜಿ.ಪಂ ಸಿಇಒ
ಫ್ರೀಡಂ ಪಾರ್ಕ್‌ನಿಂದ ಜೈಲ್ ಸರ್ಕಲ್, ಗೋಪಿ ವೃತ್ತ, ಮಹಾವೀರ ವೃತ್ತ, ಜಿಲ್ಲಾಧಿಕಾರಿಗಳ ಕಛೇರಿ, ನೆಹರು ಮೈದಾನದ ಮೂಲಕ ಜಿಲ್ಲಾ ಪಂಚಾಯತ್ ಆವರಣದವರೆಗೆ ಜಾಗೃತಿ ಜಾಥಾ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಪ್ರತಿಜ್ಞಾವಿಧಿ ಬೋಧಿಸಿದರು. ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವಿಜ್ , ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಚೇತನ್ ಹೆಚ್.ಪಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರಂಗನಾಥ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಾಗಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಚುನಾವಣೆ ದಿನ ಶುಭಂ ಹೊಟೇಲ್‌ನಲ್ಲಿ ತಿಂಡಿ ಫ್ರೀ, ಕಂಡೀಷನ್ ಒಂದೇ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422