ಶಿವಮೊಗ್ಗ ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾದ ಬಸ್‌, ಅದೃಷ್ಟವಶಾತ್‌ ತಪ್ಪಿತು ದೊಡ್ಡ ದುರಂತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 MAY 2024

SHIKARIPURA : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಖಾಸಗಿ ಬಸ್‌ ಬೆಂಗಳೂರಿನಿಂದ ಸೊರಬಕ್ಕೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದು, ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್‌ ಚಾಲಕ ಸೊರಬ ನಿವಾಸಿ ಜಗದೀಶ್‌ ಮತ್ತು ಬೈಕ್‌ ಸವಾರ ಷಣ್ಮುಖಪ್ಪ ಗಾಯಗೊಂಡಿದ್ದಾರೆ. ಶಿಕಾರಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಡಬಲ್‌ ಮರ್ಡರ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ರಿಯಾಕ್ಷನ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment