ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 MAY 2024
SHIMOGA : ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 18ರಂದು ಆಚಾರ್ಯ ಅದ್ವಿತೀಯ 2K24 ಕಲ್ಚರಲ್ ಮತ್ತು ಮ್ಯಾನೇಜ್ಮೆಂಟ್ ಫೆಸ್ಟ್ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಮತಾ.ಪಿ.ಆರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಮತಾ, ವಿದ್ಯಾರ್ಥಿಗಳಿಗೆ 10 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಬೆಸ್ಟ್ ಮ್ಯಾನೇಜರ್, ಮಾರ್ಕೆಟಿಂಗ್, ಹೆಚ್ಅರ್ಎಂ, ಫೈನಾನ್ಸ್, ಸಿಂಗಿಂಗ್, ಡ್ಯಾನ್ಸ್, ರೀಲ್ಸ್, ವಾಲ್ ಆರ್ಟ್, ಸ್ಟಾಂಡ್ ಅಪ್ ಕಾಮಿಡಿ, ಒನ್ ಮಿನಿಟ್ ಗೇಮ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ರಾಜ್ಯದ ಎರಡು ಕಾಲೇಜುಗಳಿಗು ಆಹ್ವಾನ ನೀಡಲಾಗಿದೆ ಎಂದರು.
ಪ್ರತಿ ಸ್ಪರ್ಧೆಗೂ ಎರಡು ವಿಜೇತ ಪ್ರಶಸ್ತಿ ನಿಗದಿಪಡಿಸಲಾಗಿದೆ. ಇದರೊಂದಿಗೆ ಸಮಗ್ರ ಪ್ರಶಸ್ತಿ ಪಡೆಯುವ ತಂಡಕ್ಕೆ 10 ಸಾವಿರ ರೂ. ಪ್ರೋತ್ಸಾಹ ಧನ, ಟ್ರೋಫಿ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ತಿಳಿಸಿದರು.
ಯಾರೆಲ್ಲ ಭಾಗವಹಿಸುತ್ತಾರೆ?
ಮೇ 18ರಂದು ಬೆಳಗ್ಗೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ ಅನಂತಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕುಲಸಚಿವ ಎ.ಎಲ್.ಮಂಜುನಾಥ್ ಮುಖ್ಯ ಅತಿಥಿಯಾಗಿರಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ್, ಜಂಟಿ ಕಾರ್ಯದರ್ಶಿ ಡಾ. ಪಿ.ನಾರಾಯಣ ಉಪಸ್ಥಿತರಿರಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ. ವಿಶ್ವಮೂರ್ತಿ, ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಗೋಪಿನಾಥ್.ಎಸ್.ಎಂ, ಅರೇಕಾ ಟೀ ಸಿಇಒ ನಿವೇದನ್ ನೆಂಪೆ, ಡಾ. ರಾಹುಲ್ ದೇವರಾಜ್ ಮುಖ್ಯ ಅತಿಥಿಗಳಾಗಿರುತ್ತಾರೆ ಎಂದರು.
ಲೋಗೋ ಲಾಂಚ್, ಫ್ಲ್ಯಾಶ್ ಮಾಬ್ ಡ್ಯಾನ್ಸ್
ಇದೇ ವೇಳೆ ಆಚಾರ್ಯ ಅದ್ವಿತೀಯ ಕಾರ್ಯಕ್ರಮ ಲೋಗೋ ಬಿಡುಗಡೆ ಮಾಡಲಾಯಿತು. ಇದೇ ವೇಳೆ ವಿದ್ಯಾರ್ಥಿಗಳು ವಿವಿಧ ಹಾಡಿಗೆ ಫ್ಲ್ಯಾಶ್ ಮಾಬ್ ಡಾನ್ಸ್ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರೊ. ಜಗದೀಶ್.ಎಸ್, ಪ್ರೊ. ನಾಗರಾಜ್.ಕೆ.ಎಂ, ಪ್ರೊ. ಮಂಜುನಾಥ್.ಎನ್ ಇದ್ದರು.
ಇದನ್ನೂ ಓದಿ – ಎಸ್ಸೆಸ್ಸೆಲ್ಸಿ ಫಲಿತಾಂಶ, ರಾಜ್ಯಮಟ್ಟದಲ್ಲಿ ದಾಖಲೆ ನಿರ್ಮಿಸಿದ ಶಿವಮೊಗ್ಗ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422