ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ, ವಿದ್ಯಾರ್ಥಿನಿಯರದ್ದೇ ಮೇಲುಗೈ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 9 MAY 2024

EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರ ಪೈಕಿ ಶೇ.93.03ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ 11,389 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 9,592 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.84.22ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. 11,639 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. 10,828 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ.93.03ರಷ್ಟು ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.

ತಾಲೂಕುವಾರು ಹೇಗಿದೆ ಫಲಿತಾಂಶ?

ತೀರ್ಥಹಳ್ಳಿ ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ತೀರ್ಥಹಳ್ಳಿಗೆ ಶೇ.94.24ರಷ್ಟು ಫಲಿತಾಂಶ ಲಭಿಸಿದೆ. ಸೊರಬ ಶೇ.92.79, ಹೊಸನಗರ ಶೇ.92.66, ಸಾಗರ ಶೇ.92.37, ಶಿಕಾರಿಪುರ ಶೇ.90.34, ಶಿವಮೊಗ್ಗ ಶೇ.85.56, ಭದ್ರಾವತಿಯಲ್ಲಿ ಶೇ.83.87 ರಷ್ಟು ಫಲಿತಾಂಶ ಬಂದಿದೆ.

ಸರ್ಕಾರಿ ಶಾಲೆಗಳಲ್ಲಿ ಶೇ.100 ಫಲಿತಾಂಶ

ಜಿಲ್ಲೆಯ 132 ಶಾಲೆಗಳಲ್ಲಿ ಶೇ. 100ರಷ್ಟು ಫಲಿತಾಂಶ ಲಭಿಸಿದೆ. ಈ ಪೈಕಿ 37 ಸರ್ಕಾರಿ ಶಾಲೆಗಳಿವೆ. ತೀರ್ಥಹಳ್ಳಿಯ 11, ಶಿಕಾರಿಪುರದ 7, ಹೊಸನಗರದ 7, ಸಾಗರದ 5, ಸೊರಬದ 3, ಶಿವಮೊಗ್ಗದ 2, ಭದ್ರಾವತಿಯ 2 ಸರ್ಕಾರಿ ಶಾಲೆಗಳಲ್ಲಿ ಪೂರ್ಣ ಫಲಿತಾಂಶ ಬಂದಿದೆ. ಸಮಾಜ ಕಲ್ಯಾಣ ಇಲಾಖೆಯ 24 ಶಾಲೆಗಳು, 10 ಅನುದಾನಿತ, 61 ಅನುದಾನ ರಹಿತ ಶಾಲೆಗಳಲ್ಲಿಯು ಎಲ್ಲ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ

ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪೈಕಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೆ ಹೆಚ್ಚು ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ ಶೇ. 90.35ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಶೇ.86.38ರಷ್ಟು ಮಂದಿ ಪಾಸ್‌ ಆಗಿದ್ದಾರೆ.

ಇದನ್ನೂ ಓದಿ – ವಿವಿಧ ಶಾಲೆಯ 12 ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದ ಟಾಪರ್‌ಗಳು, ಇಲ್ಲಿದೆ ಲಿಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 9, 2024

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

Leave a Comment