ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 MAY 2024

SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು ಭಾಗದ ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಕೊರತೆ ಮತ್ತು ಭಾರಿ ಬಿಸಿಲಿನ ಪರಿಣಾಮ ಶರಾವತಿ ನದಿಯಲ್ಲಿ ನೀರಿನ ಮಟ್ಟ ತಗ್ಗಿದೆ.

ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರುತ್ತಿವೆ. ಇವು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್‌ ಸೇವೆ ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೆ ಹಸಿರುಮಕ್ಕಿ ಲಾಂಚ್‌ ಸೇವೆ ಇರುವುದಿಲ್ಲ. ಕಳೆದ ಒಂದು ವಾರದಿಂದ ಲಾಂಚ್‌ನಲ್ಲಿ ಜನರ ಜೊತೆಗೆ ಲಘು ಮತ್ತು ದ್ವಿಚಕ್ರ ವಾಹನಗಳನ್ನು ಮಾತ್ರ ದಾಟಿಸಲಾಗುತ್ತಿತ್ತು. ಈಗ ಲಾಂಚ್‌ ಸೇವೆ ಸಂಪೂರ್ಣಗ ಸ್ಥಗಿತವಾಗಿದೆ.

ಸುತ್ತಿ ಬಳಸಿ ಸಾಗರ ತಲುಪಬೇಕಿದೆ

ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತದಿಂದ ಸಾಗರದಿಂದ ದಕ್ಷಿಣ ಕನ್ನಡದ ಪ್ರಮುಖ ಮಾರ್ಗ ಬಂದ್‌ ಆದಂತಾಗಿದೆ. ಈಗ ದಕ್ಷಿಣ ಕನ್ನಡದಿಂದ ಸಾಗರಕ್ಕೆ ಬರುವವರು ನಗರ, ಹೊಸನಗರ ಮಾರ್ಗವಾಗಿ ಸಾಗರಕ್ಕೆ ತಲುಪಬೇಕಾಗಿದೆ. ಇನ್ನು, ಹೊಸನಗರ ತಾಲೂಕಿನ ನಿಟ್ಟೂರು, ಸಂಪೆಕಟ್ಟೆ, ಕೊಲ್ಲೂರು ಭಾಗದ ಜನರ ಓಡಾಟಕ್ಕೂ ಅಡಚಣೆಯಾಗಿದೆ. ಈ ಭಾಗದ ನಿವಾಸಿಗಳು ಸಾಗರ ತಲುಪಲು 40 ಕಿ.ಮೀ ಸುತ್ತಿ ಬಳಸಿ ತೆರಳಬೇಕಿದೆ.

ತಿಂಗಳು ಮೊದಲೆ ಸೇವೆ ಸ್ಥಗಿತ

ಸಾಮನ್ಯವಾಗಿ ಮೇ ತಿಂಗಳ ಕೊನೆ ಅಥವಾ ಜೂನ್‌ ತಿಂಗಳಲ್ಲಿ ಹಸಿರುಮಕ್ಕಿ ಲಾಂಚ್‌ ಸೇವೆ ಸ್ಥಗಿತವಾಗುತ್ತಿತ್ತು. ಆದರೆ ತೀವ್ರ ಮಳೆ ಕೊರೆತೆಯ ಪರಿಣಾಮ ಈ ಬಾರಿ ಒಂದು ಒಂದು ತಿಂಗಳು ಮೊದಲೇ ಲಾಂಚ್‌ ಸಂಚಾರ ನಿಲ್ಲಿಸಿದೆ. ಮಳೆ ಆರಂಭವಾಗಿ, ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದರಷ್ಟೆ ಲಾಂಚ್‌ ಸೇವೆ ಪುನಾರಂಭವಾಗಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 10, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment