ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MAY 2024
SHIMOGA : ಲಷ್ಕರ್ ಮೊಹಲ್ಲಾದಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಶಿವಮೊಗ್ಗ ತಾಲೂಕು ಬೀರನಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಶೋಯಬ್ ಅಲಿಯಾಸ್ ಅಂಡ ಎಂಬಾತನ ಕಾಲಿಗೆ ಗುಂಡು ಹೊಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವತ್ತು ಬೆಳಗಿನ ಜಾವ ಶೋಯಬ್‌ನ ಬಂಧನಕ್ಕೆ ಪಿಎಸ್‌ಐ ಕುಮಾರ್ ಮತ್ತು ಸಿಬ್ಬಂದಿ ಅಣ್ಣಪ್ಪ ಬೀರನಕೆರೆಗೆ ತೆರಳಿದ್ದರು. ಈ ಸಂದರ್ಭ ಮಾರಕಾಸ್ತ್ರದಿಂದ ಪೊಲೀಸ್ ಸಿಬ್ಬಂದಿ ಮೇಲೆ ಆತ ದಾಳಿಗೆ ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪಿಎಸ್‌ಐ ಕುಮಾರ್ ಗುಂಡು ಹಾರಿಸಿದ್ದಾರೆ.
ಶೋಯಬ್ ಅಲಿಯಾಸ್ ಅಂಡ ಹಲವು ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದ. ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣಗಳಿವೆ. ಈ ಪೈಕಿ ಎರಡು ಕೊಲೆ ಯತ್ನ ಪ್ರಕರಣಗಳಿವೆ. ಈತ ಆದಿಲ್ ಗ್ಯಾಂಗ್‌ನಲ್ಲಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 3 ಮರ್ಡರ್, ಬಂಧಿತರ ಹೆಸರು ಬಹಿರಂಗ, ಬಿಗಿ ಬಂದೋಬಸ್ತ್‌ನಲ್ಲಿ ಯಾಸಿನ್ ಅಂತ್ಯಸಂಸ್ಕಾರ
LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





