ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 MAY 2024
SHIMOGA : ಕಳೆದ ಆರು ಅವಧಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೆ ಗೆಲುವು ಸಾಧಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಗೆಲ್ಲಲ್ಲಿದ್ದಾರೆ. ಮೇ 16ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ಆರ್ಎಸ್ಎಸ್ ಸ್ವಯಂ ಸೇವಕ, ಸಾಮಾಜಿಕ ಚಟುವಟಿಕೆ, ವೈದ್ಯರಾಗಿ ಡಾ. ಧನಂಜಯ ಸರ್ಜಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಕೇಂದ್ರಿಯ ಸಮಿತಿ ಡಾ. ಧನಂಜಯ ಸರ್ಜಿ ಅವರ ಹೆಸರನ್ನು ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯ್ಕೆ ಮಾಡಿದೆ. ಮೇ 16ರಂದು ಪಕ್ಷದ ಹಿರಿಯರೊಂದಿಗೆ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಾರಿಯು ಬಿಜೆಪಿ ಅಭ್ಯರ್ಥಿಯೆ ಗೆಲ್ಲಲಿದ್ದಾರೆ ಎಂದು ತಿಳಿಸಿದರು.
1988ರಲ್ಲಿ ನೈಋತ್ಯ ಪದವೀಧರ ಕ್ಷೇತ್ರ ಸ್ಥಾಪಿಸಲಾಯಿತು. ಮೊದಲ ಚುನಾವಣೆಯಲ್ಲಿ ಡಿ.ಹೆಚ್.ಶಂಕರಮೂರ್ತಿ ಅವರು ಸ್ಪರ್ಧಿಸಿ ಗೆದ್ದಿದ್ದರು. ಈ ಕ್ಷೇತ್ರಕ್ಕೆ ಆರು ಬಾರಿ ಚುನಾವಣೆಯಾಗಿದ್ದು ಆರು ಬಾರಿಯು ಬಿಜೆಪಿ ಅಭ್ಯರ್ಥಿಗಳೆ ಗೆದ್ದಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ಒಟ್ಟು 81,750 ಮತದಾರರು ನೋಂದಾಯಿಸಿಕೊಂಡಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ 30 ವಿಧಾನಸಭೆ ಕ್ಷೇತ್ರದಲ್ಲಿ 15 ಶಾಸಕರು ಬಿಜೆಪಿಯವರು. ಇನ್ನು, ಲೋಕಸಭೆ ಚುನಾವಣೆ ಸಂದರ್ಭದಲ್ಲು ಬಿಜೆಪಿ ಕಾರ್ಯಕರ್ತರು ನೋಂದಾಯಿತ ಮತದಾರರ ಜೊತೆ ಸಂಪರ್ಕದಲ್ಲಿದ್ದರು. ಈ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಗೆಲ್ಲಲಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422