ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 MAY 2024
SHIMOGA : ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ನೆಪದಲ್ಲಿ ಹಗಲು ದರೋಡೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮ್ಮದ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಜೀರ್ ಅಹಮ್ಮದ್, ಜೂನ್ ತಿಂಗಳು ಸಮೀಪಿಸುತ್ತಿರುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗುತ್ತಿದೆ. ಪ್ರತಿ ವರ್ಷ ಶೇ.15ರಷ್ಟು ಶುಲ್ಕ ಹೆಚ್ಚಿಸುತ್ತಾರೆ. ಸರ್ಕಾರ ಕೂಡ ಇದಕ್ಕೆ ಅನುಮೋದನೆ ನೀಡುತ್ತಿದೆ. ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರವಿದ್ದರೂ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ತಪ್ಪಿಸಿದೆ. ಅದೇ ರೀತಿ ಎಲ್ಲ ರಾಜ್ಯಗಳು ಖಾಸಗಿ ಶಾಲೆಗಳ ಶುಲ್ಕ ನಿಗದಿ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶುಲ್ಕ ನಿಗದಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸಿಲ್ಲ. ಇನ್ನೊಂದೆಡೆ ಖಾಸಗಿ ಶಾಲೆ ಮೋಹಕ್ಕೆ ಒಳಗಾದ ಪಾಲಕರು ಡೊನೇಷನ್ ವಿರುದ್ಧ ಮಾತನಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಆಪ್ ಮುಖಂಡರಾದ ಹರೀಶ್, ಯೂಸೂಫ್, ಸಾಹೀರ್, ಗೌಸ್ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಬಡ್ಡಿ ದಂಧೆಗೆ ಶಿವಮೊಗ್ಗದಲ್ಲಿ ಮಹಿಳೆ ಬಲಿ, ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422