ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 MAY 2024
SHIMOGA : ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಡೊನೇಷನ್ ಹಾವಳಿಗೆ (Donation Menace) ತಡೆಯೊಡ್ಡಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತದೆ. ಶುಲ್ಕದಲ್ಲಿ ವಿನಾಯಿತಿ ನೀಡಿದರೆ ಸಾವಿರಾರು ವಿದ್ಯಾರ್ಥಿಗಳಿಗೆ ಹಾಗೂ ಬಡವರಿಗೆ ಅನುಕೂಲವಾಗುತ್ತದೆ. ಸರ್ಕಾರ ನಿಗದಿಪಡಿಸುವ ಶುಲ್ಕ ಪಡೆಯುವಂತೆ ಸೂಚಿಸಬೇಕು. ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಿಂದ ಹಾಗೂ ಪದವಿ ಪೂರ್ವ ಕಾಲೇಜುಗಳಿಂದ ಪಾಲಕರಿಗೆ ಆಗುವ ಕಿರುಕುಳ ತಪ್ಪಿಸಬೇಕು. ರಾಜ್ಯದಲ್ಲಿ ಡೋನೆಷನ್‌ಗೆ ಕಡಿವಾಣ ಹಾಕಬೇಕು ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಆಗ್ರಹಿಸಿದರು.
ಪಿಯುಸಿ ಫಲಿತಾಂಶ ಪ್ರಕಟಗೊಂಡು ತಿಂಗಳು ಕಳೆಯುವುದರಲ್ಲಿ ಖಾಸಗಿ ಕಾಲೇಜುಗಳು ಪ್ರವೇಶಾತಿ ಮುಗಿದಿವೆ ಎನ್ನುತ್ತಿದ್ದಾರೆ. ಇದರಿಂದ ಹಲವು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪ್ರವೇಶಾತಿಯಿಂದ ವಂಚಿತರಾಗಲಿದ್ದಾರೆ. ಆದ್ದರಿಂದ ಖಾಸಗಿ ಪದವಿ ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ರೋಸ್ಟರ್ ಪದ್ಧತಿ ಅನುಸರಿಸಿ ಪ್ರವೇಶ ಪ್ರಕ್ರಿಯೆ ಆರಂಭಿಸಲು ಆದೇಶಿಸಬೇಕು. ಇಲ್ಲವಾದರೆ ಎನ್ಎಸ್‌ಯುಐ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
ಜಿಲ್ಲಾಧ್ಯಕ್ಷ ವಿಜಯಕುಮಾರ್, ಕಾರ್ಯಧ್ಯಕ್ಷ ಕಾಟಿಕೆರೆ ರವಿ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ನಗರ ಅಧ್ಯಕ್ಷ ಚರಣ್, ಚಂದ್ರು ಜಿ ರಾವ್, ರವಿ, ವರುಣ್, ತೌಫಿಕ್, ತೇಜು, ಸುಹಾಸ್, ಅಭಿಷೇಕ್, ಸೃಜನ್ ಫರಾನ್, ಪ್ರಜ್ವಲ್ ಸೇರಿ ಹಲವಾರು ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ದಟ್ಟ ಮೋಡ, ಗುಡುಗು ಸಹಿತ ಮಳೆ, ಜಿಲ್ಲೆಯ ವಿವಿಧೆಡೆ ವರ್ಷಧಾರೆ, ಎಲ್ಲೆಲ್ಲಿ ಮಳೆಯಾಗ್ತಿದೆ?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















