ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 MAY 2024
SHIMOGA : ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡಬೇಕು ಎಂದು ಆಗ್ರಹಿಸಿ ಗೊಂದಿ ಚಟ್ನಹಳ್ಳಿ ಗ್ರಾಮಸ್ಥರು, ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ (Villagers Protest) ನಡೆಸಿದರು. ಬಳಿಕ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಗೊಂದಿ ಚಟ್ನಹಳ್ಳಿಯಲ್ಲಿ ಸುಮಾರು 15 ಕಡೆ ಪರವಾನಗಿ ಇಲ್ಲದೆ ಮದ್ಯದ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮದಲ್ಲಿ ಮದ್ಯವೆಸನಿಗಳ ಹೆಚ್ಚಾಗಿದ್ದಾರೆ. ವಿದ್ಯಾರ್ಥಿಗಳು ಕೂಡ ಮದ್ಯಕ್ಕೆ ದಾಸರಾಗಿದ್ದಾರೆ. ಮದ್ಯ ಸೇವಿಸಿ ವಾಹನಗಳನ್ನು ವೇಗವಾಗಿ ಚಲಿಸುವುದು, ವೀಲಿಂಗ್ ಮಾಡುವುದು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಜಗಳ, ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಪೊಲೀಸ್ ಮತ್ತು ಅಬಕಾರಿ ಇಲಾಖೆಗೆ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಡೊನೇಷನ್ ಹಾವಳಿ, ತಡೆಯೊಡ್ಡದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422