ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 MAY 2024
SHIMOGA : ಬೀಡಾ ಅಂಗಡಿಗಳಿಗೆ ಬೀಡಾ ವಸ್ತುಗಳನ್ನು ಸರಬರಾಜು ಮಾಡಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಟ್ರಾಕ್ಟರ್ (Tractor) ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿ ಸಮೀಪ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.
ಮಾರ್ನಮಿ ಬೈಲು ನಿವಾಸಿ ಕೃಷ್ಣಕುಮಾರ್ ಪ್ರಜಾಪತಿ (32) ಮೃತರು. ಶಿವಮೊಗ್ಗ ಬಸ್ ನಿಲ್ದಾಣದ ಎದುರಿಗೆ ಕೃಷ್ಣಕುಮಾರ್ ಬೀಡಾ ಅಂಗಡಿ ನಡೆಸುತ್ತಿದ್ದರು. ವಿವಿಧ ಬೀಡಾ ಅಂಗಡಿಗಳಿಗೆ ಬೀಡಾ ವಸ್ತುಗಳ ಸರಬರಾಜು ಮಾಡುವ ವ್ಯವಹಾರವನ್ನು ಮಾಡುತ್ತಿದ್ದರು. ಮೇ 11ರಂದು ರಾತ್ರಿ ಬೀಡಾ ವಸ್ತುಗಳನ್ನು ಅಂಗಡಿಗೆ ಕೊಟ್ಟು ಮನೆಗೆ ಮರಳುವಾಗ ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಎದುರಿನಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.
ಕೃಷ್ಣಕುಮಾರ್ ಪ್ರಜಾಪತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಡೊನೇಷನ್ ಹಾವಳಿ, ತಡೆಯೊಡ್ಡದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422