SHIVAMOGGA LIVE NEWS | 15 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIKARIPURA : ಲೋಕಸಭೆ ಚುನಾವಣೆ ಮತ ಎಣಿಕೆಗೆ 20 ದಿನ ಬಾಕಿ ಇದೆ. ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ಬೆಟ್ಟಿಂಗ್ ಜೋರಾಗಿದೆ. ಈಚೆಗೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಟ್ರಾಕ್ಟರ್ (Tractor challenge) ಪಣಕ್ಕಿಟ್ಟಿದ್ದರು. ಶಿಕಾರಿಪುರದ ಜಮೀನ್ದಾರ್ ಮಂಜುನಾಥ್ ಎಂಬುವವರು ಸವಾಲು ಸ್ವೀಕರಿಸಿದ್ದಾರೆ.
ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆ. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇಗುಲದಲ್ಲಿ ಎಲ್ಲರ ಸಮುಖದಲ್ಲಿ ಟ್ರಾಕ್ಟರ್ ಕೀ ನೀಡಿ ಸವಾಲು ಸ್ವೀಕರಿಸಲು ಸಿದ್ಧ ಎಂದು ವಿಡಿಯೋ ಮಾಡಿ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ತೀವ್ರ ಕುತೂಹಲವಿದೆ. ಅಭ್ಯರ್ಥಿಗಳ ಗೆಲುವು, ಸೋಲಿನ ಕುರಿತು ನಾನಾ ವಿಶ್ಲೇಷಣೆಗಳು ನಡೆಯುತ್ತಿವೆ. ಅದರ ಜೊತೆಗೆ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಇದನ್ನೂ ಓದಿ – ‘ಗೀತಾ ಶಿವರಾಜ್ ಕುಮಾರ್ ಗೆಲ್ತಾರೆ’, ಟ್ರಾಕ್ಟರ್ ಪಣಕ್ಕಿಟ್ಟು ಶಿಕಾರಿಪುರದ ರೈತನ ಓಪನ್ ಚಾಲೆಂಜ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






