ಪರಿಚಿತ ಅಂತಾ ಗಾಡಿ ನಿಲ್ಲಿಸಿ ಮಾತಾಡಿದ್ದೆ ತಪ್ಪಾಯ್ತಾ? ಸಿಸಿಟಿವಿ ಚೆಕ್‌ ಮಾಡಿದಾಗ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2024

SHIMOGA : ಗೂಡ್ಸ್‌ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿ ಇಟ್ಟಿದ್ದ 1.50 ಲಕ್ಷ ರೂ. ಹಣವನ್ನು (Money) ವ್ಯಕ್ತಿಯೊಬ್ಬ ಕಳ್ಳತನ ಮಾಡಿದ್ದಾನೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಸವಾರ್‌ಲೈನ್‌ ರಸ್ತೆಯಲ್ಲಿರುವ ವಿಆರ್‌ಎಲ್‌ ಕಚೇರಿ ಆವರಣದಲ್ಲಿ ಘಟನೆ ಸಂಭವಿಸಿದೆ.

ಪರಿಚಿತ ಅಂತಾ ಮಾತಾಡಿಸಿದ್ದೆ ತಪ್ಪಾಯ್ತಾ?

ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್‌ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್‌ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ವಿಆರ್‌ಎಲ್‌ ಸಂಸ್ಥೆಯಲ್ಲಿ ಪಾರ್ಸಲ್‌ ಕೊಂಡೊಯ್ಯಲು ಬಂದಿದ್ದರು. ಈ ಸಂದರ್ಭ ನರಸಿಂಹಮೂರ್ತಿ ಎಂಬಾತ ಸಿಕ್ಕಿದ್ದು, ಆತನೊಂದಿಗೆ ಮಾತನಾಡಿದ್ದಾರೆ. ತಿಮ್ಮಪ್ಪ ವಿಆರ್‌ಎಲ್‌ ಕಚೇರಿ ಒಳ ಹೋದಾಗ ನರಸಿಂಹಮೂರ್ತಿ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿದ್ದ 1.50 ಲಕ್ಷ ರೂ. ಹಣ ಕಳ್ಳತನ ಮಾಡಿದ್ದ.

ಹಣ ಕಳವು ಗೊತ್ತಾಗಿದ್ದು ಹೇಗೆ?

ಕೋಣಂದೂರಿನ ಫ್ಯಾನ್ಸಿ ಅಂಗಡಿಯೊಂದರ ಮಾಲೀಕ ಗಾಂಧಿ ಬಜಾರ್‌ನಲ್ಲಿ ಒಂದಷ್ಟು ವಸ್ತುಗಳನ್ನು ತರಲು ತಿಮ್ಮಪ್ಪ ಅವರಿಗೆ ಆ ಹಣ ನೀಡಿದ್ದರು. ತಿಮ್ಮಪ್ಪ ಅವರು ವಿಆರ್‌ಎಲ್‌ನಲ್ಲಿ ಪಾರ್ಸಲ್‌ ತೆಗೆದುಕೊಂಡು ಗಾಂಧಿ ಬಜಾರ್‌ಗೆ ತೆರಳಿ ಹೋಲ್‌ ಸೇಲ್‌ ವ್ಯಾಪಾರಿಗೆ ಹಣ ನೀಡಲು ಡ್ಯಾಶ್‌ ಬೋರ್ಡ್‌ ತೆಗೆದಾಗ ಹಣ ನಾಪತ್ತೆಯಾಗಿತ್ತು. ವಿಆರ್‌ಎಲ್‌ ಕಚೇರಿಗೆ ಹಿಂತಿರುಗಿ ಮ್ಯಾನೇಜರ್‌ಗೆ ತಿಳಿಸಿ ಸಿಸಿಟಿವಿ ಪರಿಶೀಲಿಸಿದಾಗ ನರಸಿಂಹಮೂರ್ತಿ ಕಳ್ಳತನ ಮಾಡಿರುವುದು ಗೊತ್ತಾಗಿದೆ.

ನರಸಿಂಹಮೂರ್ತಿಗೆ ಕರೆ ಮಾಡಿದ ವಿಆರ್‌ಎಲ್‌ ಮ್ಯಾನೇಜರ್‌ ಹಣ ಹಿಂತಿರುಗಿಸುವಂತೆ ಸೂಚಿಸಿದ್ದಾರೆ. ಆದರೆ ಆತ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ‘ಅಮೃತಧಾರೆ’ ಆರಂಭ, ಏನಿದು? ಉದ್ದೇಶವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment