ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 MAY 2024
RAINFALL : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಉತ್ತಮವಾಗಿದೆ. ಈ ಮಧ್ಯೆ ಪ್ರಸಕ್ತ ಸಾಲಿನ ಮುಂಗಾರು (Monsoon) ಮಾರುತ ಜೂ. 1ರಂದೇ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಕೇರಳಕ್ಕೆ ಪ್ರವೇಶಿಸಲಿದೆ
ಮೇ 19ರಂದು ನೈಋತ್ಯ ಮುಂಗಾರು ಮಾರುತ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಆಗ್ನೆಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ. ಜೂನ್ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಪ್ರವೇಶಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಗಾಡಿಕೊಪ್ಪ, ಗೋಪಾಳದ ಇಬ್ಬರು ಯುವಕರು ಅರೆಸ್ಟ್
24 ಗಂಟೆಯಲ್ಲಿ ಎಷ್ಟಾಯ್ತು ಮಳೆ?
ಶಿವಮೊಗ್ಗದಲ್ಲಿ ಮೇ 14ರ ಬೆಳಗ್ಗೆ 8.30ರಿಂದ ಮೇ 15ರ ಬೆಳಗ್ಗೆ 8.30ರವರೆಗೆ 5.1 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 6.7 ಮಿ.ಮೀ., ಹೊಸನಗರ 8.9 ಮಿ.ಮೀ., ಸಾಗರ 4 ಮಿ.ಮೀ., ಶಿಕಾರಿಪುರ 4.1 ಮಿ.ಮೀ., ಶಿವಮೊಗ್ಗ 3.6 ಮಿ.ಮೀ., ಸೊರಬ 5.5 ಮಿ.ಮೀ., ತೀರ್ಥಹಳ್ಳಿ 3.4 ಮಿ.ಮೀ. ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






