ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಡಿಸಿಸಿ ಬ್ಯಾಂಕ್ ನೇಮಕಾತಿ ಹಗರಣ ಮತ್ತು ಶಾಹಿ ಗಾರ್ಮೆಂಟ್ಸ್‌ಗೆ ಭೂಮಿ ಹಂಚಿಕೆ ಸಂಬಂಧ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.
ವಿಷಯ 1 : ರಾಜೀನಾಮೆ ನೀಡುತ್ತೇನೆ
ಡಿಸಿಸಿ ಬ್ಯಾಂಕ್ ನೇಮಕಾತಿಯಲ್ಲಿ ಹಗರಣ ನಡೆದಿದೆ. 80 ಅಭ್ಯರ್ಥಿಗಳಿಗೆ ಬ್ಯಾಂಕಿನಿಂದ ಸಾಲ ಕೊಡಿಸಿ ಲಂಚ ಪಡೆಯಲಾಗಿದೆ. ಇದರ ಬಗ್ಗೆ ಕೂಲಂಕಷ ತನಿಖೆಯಾಗಬೇಕು. ಇನ್ನು ಶಾಹಿ ಗಾರ್ಮೆಂಟ್ಸ್‌ಗೆ ಅಗತ್ಯಕ್ಕಿಂತಲೂ ಹೆಚ್ಚಿನ ಭೂಮಿ ಹಂಚಿಕೆ ಮಾಡಲಾಗಿದೆ. ಇವೆರಡು ಪ್ರಕರಣಗಳ ತನಿಖೆಯಾಗಬೇಕು. ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.
ವಿಷಯ 2 : ರಾಜಕೀಯ ನಿವೃತ್ತಿಯ ಸವಾಲು
ಜಿಲ್ಲೆಯ ಅಭಿವೃದ್ಧಿಗೆ ರಾಘವೇಂದ್ರ ಕೊಡುಗೆ ಶೂನ್ಯ. ಇದೆ ಕಾರಣಕ್ಕೆ ಲೋಕಸಭೆ ಚುನಾವಣೆ ಸಂದರ್ಭ ನರೇಂದ್ರ ಮೋದಿಗೆ ಮತ ನೀಡಿ ಎಂದು ಅಂಗಲಾಚಿದ್ದಾರೆ. ಇನ್ನು, ಯಡಿಯೂರಪ್ಪ ಅವರು ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಬಿಜೆಪಿ ಗೆಲ್ಲಲ್ಲಿದೆ ಎಂದು ಹೇಳಿದ್ದಾರೆ. ಒಂದು ವೇಳೆ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇಲ್ಲವಾದಲ್ಲಿ ಯಡಿಯೂರಪ್ಪ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತದೆಯೇ?
ಇದನ್ನೂ ಓದಿ – ಶಿವಮೊಗ್ಗದಲ್ಲಿ ಡಿಕೆಶಿ ಫೋಟೊಗೆ ಹಾಲಿನ ಅಭಿಷೇಕ, ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರತಿಭಾ ಪುರಸ್ಕಾರ
ವಿಷಯ 3 : ಪ್ರಜ್ವಲ್ ಕೇಸ್, ವಿಳಂಬಕ್ಕೆ ಖಂಡನೆ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹಿಸುತ್ತಿದೆ. ಸಿಬಿಐಗೆ ಘನತೆ ಇದೆ. ಈ ಪ್ರಕರಣ ಎಸ್‌ಐಟಿಗೆ ವಹಿಸಿರುವುದೆ ಹೆಚ್ಚು. ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಪೆನ್ ಡ್ರೈವ್ ಇದೆ ಅಂದಿದ್ದರು. ಮಹಿಳೆಯರು ದಾರಿ ತಪ್ಪಿದ್ದಾರೆ ಎಂದಿದ್ದರು. ನಿಮ್ಮ ಮಗ ಪ್ರಜ್ವಲ್ ದಾರಿ ತಪ್ಪಿದ್ದಾನೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ವಿಳಂಬ ಮಾಡುತ್ತಿದೆ. ಇದಕ್ಕೆ ತಮ್ಮ ಖಂಡನೆ ಇದೆ.
ಬಾಲಾಜಿ, ಮಧುಸೂದನ್, ಪದ್ಮನಾಭ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಇದ್ದರು.