ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆ, ಸಿಟಿ ಈಗ ಕೂಲ್‌ ಕೂಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2024

RAIN NEWS : ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಜೋರು ಮಳೆ ಆರಂಭವಾಗಿದೆ. ನಗರದ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ. ಜೋರು ಮಳೆಯಿಂದಾಗಿ ವಾತಾವರಣ ತಂಪಾಗಿದೆ.

ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಬಿಸಿಲಿತ್ತು. ಸಂಜೆ ವೇಳೆಗೆ ಮೋಡ ಕವಿದಿದ್ದು, ಮಳೆ ಆರಂಭವಾಗಿದೆ. ವಿವಿಧೆಡೆ ರಸ್ತೆ ಮೇಲೆ ನೀರು ಹರಿಯುತ್ತಿದೆ. ಸದ್ಯ ಜೋರು ಮಳೆಯಿಂದಾಗಿ ನಗರದಲ್ಲಿ ಶಕೆ ಕಡಿಮೆಯಾಗಿದೆ. ಇದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಡಿಕೆಶಿ ಫೋಟೊಗೆ ಹಾಲಿನ ಅಭಿಷೇಕ, ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರತಿಭಾ ಪುರಸ್ಕಾರ

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಮೇ 31ರಂದು ಮುಂಗಾರು ಕೇರಳ ಪ್ರವೇಶಿಸಲಿದೆ. ಆ ಬಳಿಕ ಹಂತ ಹಂತವಾಗಿ ದೇಶವ್ಯಾಪಿ ಮಳೆಯಾಗಲಿದೆ. ಕಳೆದ ಬಾರಿ ಮಳೆ ಕೊರತೆಯಿಂದಾಗಿ ಬರ ಸೃಷ್ಟಿಯಾಗಿತ್ತು. ಆದರೆ ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment