ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 MAY 2024
SHIMOGA : ನಗರದ ಎರಡು ಕ್ಲಬ್‌ಗಳ (clubs) ಮೇಲೆ ಪೊಲೀಸರು ದಾಳಿ ನಡೆಸಿ 19 ಮಂದಿಯನ್ನು ಬಂಧಿಸಿದ್ದಾರೆ. ನಗದು, ಮೊಬೈಲ್, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಕೇಸ್ 1 : 13 ಮಂದಿ ಬಂಧನ
ಕಟ್ಟೆ ಸುಬ್ಬಣ್ಣ ಬಳಿ ಇರುವ ಭೈರವ ಫ್ರೆಂಡ್ಸ್ ಕ್ಲಬ್‌ನಲ್ಲಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. 13 ಮಂದಿಯನ್ನು ಬಂಧಿಸಲಾಗಿದೆ. ಜೂಜಾಟದಲ್ಲಿ ತೊಡಗಿಸಿದ್ದ 6,700 ರೂ. ನಗದು, 14 ಮೊಬೈಲ್, 4 ಬೈಕ್, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಕೇಸ್ 2 : 6 ಮಂದಿ ಅರೆಸ್ಟ್
ಆಟೋ ಕಾಂಪ್ಲೆಕ್ಸ್ ಬಳಿ ಇರುವ ಮೀಡಿಯಾ ಕ್ಲಬ್‌ನಲ್ಲಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. 6 ಮಂದಿಯನ್ನು ಬಂಧಿಸಲಾಗಿದೆ. ಜೂಜಾಟದಲ್ಲಿ ತೊಡಗಿಸಿದ್ದ 5,900 ರೂ. ನಗದು, 7 ಮೊಬೈಲ್ ಫೋನ್, 5 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಆಗುಂಬೆ ಘಾಟಿ, ಸೋಮೇಶ್ವರದಲ್ಲಿ KSRTC ಬಸ್ ಅಡ್ಡಗಟ್ಟಿದ ಕೇರಳದ ಯುವಕರು, ಡ್ರೈವರ್ ಮೇಲೆ ಹಲ್ಲೆ
ಇನ್ಸ್‌ಪೆಕ್ಟರ್ ಚಂದ್ರಕಲಾ ನೇತೃತ್ವದಲ್ಲಿ ವಿನೋಬನಗರ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






