ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 MAY 2024
HOLEHONNURU : ಜೋರು ಮಳೆಗೆ ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ (Drowned). ಇದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಮನೆಗಳಿಗೆ ನೀರು ನುಗ್ಗಿದೆ.
ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆ, ಮಿಯಾಜಾನ್ ಕಾಲೋನಿ, ಅಂಬೇಡ್ಕರ್ ನಗರದ ಮುಖ್ಯ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಹಾಗಾಗಿ ಕಸ ತುಂಬಿಕೊಂಡು ನೀರು ಮುಂದೆ ಸಾಗದೆ ರಸ್ತೆ ಮೇಲೆ ಹರಿಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೃತ್ತಿಕ ಮಳೆ ಅಬ್ಬರಕ್ಕೆ ತಗ್ಗಿದ ತಾಪಮಾನ, ಇವತ್ತು ಎಷ್ಟಿದೆ? ಮಳೆ ಹೇಗಿರುತ್ತೆ?
ಹನುಮಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್ಸಿ ಕಾಲೋನಿಯಲ್ಲಿ ಚರಂಡಿ ದುರಸ್ಥಿಯಾಗಿಲ್ಲ. ಹಾಗಾಗಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ. ಮಳೆ ನೀರಿನ ಜೊತೆ ಕೊಳಚೆ ನೀರು ಮನೆಯೊಳಗೆ ನುಗ್ಗಿತ್ತು. ಕೂಡಲೆ ಸಮಸ್ಯೆ ಪರಿಹಾರ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422