ಮಂಡಗದ್ದೆ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌, ಘಟನೆ ಸಂಭವಿಸಿದ್ದು ಹೇಗೆ?

SHIVAMOGGA LIVE NEWS | 21 MAY 2024

THIRTHAHALLI : ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ (BUS) ಮರಕ್ಕೆ ಡಿಕ್ಕಿ ಹೊಡೆದಿದೆ. ಮಂಡಗದ್ದೆಯ 15ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಖಾಸಗಿ ಬಸ್ಸು ಕಳಸದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಓವರ್‌ ಟೇಕ್ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಬಲ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದು ದಿನ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Kalleshwara-Enterprises.webp

ಅಪಘಾತದ ಬಳಿಕ ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು, ಆಂಬುಲೆನ್ಸ್‌ನ ನೆರವಿನಿಂದ ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment