ಫೋಟೊಗ್ರಾಫರ್‌ ದುರ್ಮರಣ, ಬೈಕ್‌ಗಳ ಅಪಘಾತದಲ್ಲಿ ಒಬ್ಬ ಸಾವು, ಮತ್ತೊಬ್ಬರ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MAY 2024

SAGARA : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆನಂದಪುರ ಮೂಲದ ಫೋಟೊಗ್ರಾಫರ್‌ (Photographer) ಅರುಣ್ (30) ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಪಟ್ಟಣದ ಜಂಬಗಾರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು?

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫೋಟೊಗ್ರಾಫರ್‌ ಅರುಣ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಕುಂಸಿ ಬಳಿ ಮೃತಪಟ್ಟಿದ್ದಾರೆ. ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment