ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 MAY 2024
SHIMOGA : ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಖಾಸಗಿ ಬಸ್ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದ್ದು, ಕಂಡಕ್ಟರ್ (CONDUCTOR) ಒಬ್ಬರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ – ಆಗುಂಬೆ (Agumbe) ಮಾರ್ಗದ ಎರಡು ಬಸ್ಸುಗಳ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದೆ. ಬೆಳಗ್ಗೆ 4.33ಕ್ಕೆ ಒಂದು ಬಸ್ ಈ ಮಾರ್ಗದಲ್ಲಿ ಹೊರಡಬೇಕಿತ್ತು. ಬೆಳಗ್ಗೆ 5 ಗಂಟೆಗೆ ಮತ್ತೊಂದು ಬಸ್ ಹೊರಡಬೇಕಿತ್ತು. ಬೆಳಗ್ಗೆ 4.33ರ ಖಾಸಗಿ ಬಸ್ ಹೊರಡುವ ಮೊದಲೇ 5 ಗಂಟೆಯ ಬಸ್ ನಿಲ್ದಾಣದ ಪ್ರವೇಶಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿತ್ತು. ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್ ನಂದನ್ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – RCBಗೆ ಪರ ಯುವತಿಯರ ಘೋಷಣೆ, ಜರ್ಸಿ ನಂಬರ್ ಟ್ಯಾಟೋ ಹಾಕಿಸಿಕೊಂಡ ವಿದ್ಯಾರ್ಥಿನಿ
ಚಾಲಕ ನಾಗೇಶ್, ಕಂಡಕ್ಟರ್ ಹನುಮಂತ, ಅಭಿ ಶೆಣೈ, ಆದರ್ಶ ಎಂಬುವವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















