ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MAY 2024
SHIMOGA : ಕ್ಷುಲಕ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪೊಲೀಸರು ಏರ್ ಗನ್ (Air Gun) ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕ್ಷುಲಕ ವಿಚಾರಕ್ಕೆ ಕಿರಿಕ್
ಬಾಲರಾಜ್ ಅರಸ್ ರಸ್ತೆಯಲ್ಲಿ ಡಿವೈಡರ್ ಬಳಿ ಬೈಕ್‌ನಲ್ಲಿದ್ದವರು ಆಟೋದಲ್ಲಿ ತೆರಳುತ್ತಿದ್ದವರಿಗೆ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಗಲಾಟೆಯಾಗಿತ್ತು. ಪೊಲೀಸರಿಗೆ ಮಾಹಿತಿ ತಲುಪಿದ್ದು ಸ್ಥಳಕ್ಕೆ ಭೇಟಿ ನೀಡಿ ಗಲಾಟೆ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಈ ವೇಳೆ ಬಸವಲಿಂಗೇಶ್ (19) ಎಂಬಾತನ ಬಳಿ ಏರ್ ಗನ್ ಸಿಕ್ಕಿದೆ. ಇದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ – ವಿದ್ಯಾನಗರದಲ್ಲಿ ಬೆಳಗ್ಗೆ ವೈನ್ ಶಾಪ್ ಬಾಗಿಲು ತೆಗೆಯಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್, ಆಗಿದ್ದೇನು?
ಕ್ಷುಲಕ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದ ಹಿನ್ನೆಲೆ ಬಸವಲಿಂಗೇಶ್ (19), ಮಂಜುನಾಥ (20), ಜಬೀರ್ (24), ಮುಬಾರಕ್ (22) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















