ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MAY 2024
SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಹಿಂದಿನಿಂದ ಬಂದು ಬೆನ್ನು ತಟ್ಟಿ, ಕೈಗೆ ಏನೋ ಸವರಿ ಬಂಗಾರದ ಸರ ಕಳ್ಳತನ (Chain Theft) ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಘಟನೆ ಸಂಭವಿಸಿದ್ದು ಹೇಗೆ?
ಗೋಪಾಳದ ಶಾಂತಾ ಜವಾಹರ ಎಂಬುವವರು ಗಾಂಧಿ ಬಜಾರ್‌ನಲ್ಲಿ ನಡೆದು ಹೋಗುತ್ತಿದ್ದಾಗ ಹಿಂಬದಿಯಿಂದ ಇಬ್ಬರು ಮಹಿಳೆಯರು ಬಂದು ಬೆನ್ನು ತಟ್ಟಿದ್ದಾರೆ. ಶಾಂತಾ ಅವರು ತಿರುಗುತ್ತಿದ್ದಂತೆ ಕೈಗೆ ಏನೋ ಸವರಿದ್ದಾರೆ ಎಂದು ಆರೋಪಿಸಲಾಗಿದೆ. ಶಾಂತಾ ಅವರಿಗೆ ಮಂಕು ಕವಿದಂತಾಗಿದ್ದು, ಆ ಮಹಿಳೆಯರು ಹೇಳಿದಂತೆ ತಮ್ಮ ಕೊರಳಲ್ಲಿದ್ದ ಬಂಗಾರದ ಸರ ಬಿಚ್ಚಿ ಕೊಟ್ಟಿದ್ದಾರೆ. ಎರಡು ದಿನವಾದರೂ ಮಂಕು ಕವಿದಂತಹ ಪರಿಸ್ಥಿತಿ ಇತ್ತು. ಆ ಬಳಿಕ ಚೇತರಿಸಿಕೊಂಡು ಕುಟುಂಬದವರಿಗೆ ವಿಚಾರ ತಿಳಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಸೂಡಾಗೆ ಒಂದು ವಾರದ ಡೆಡ್‌ಲೈನ್, ಬೇಡಿಕೆ ಈಡೇರಿಸದಿದ್ದರೆ ಕಾನೂನು ಹೋರಾಟದ ವಾರ್ನಿಂಗ್
10 ಗ್ರಾಂ ತೂಕದ 67 ಸಾವಿರ ರೂ. ಮೌಲ್ಯದ ಚಿನ್ನದ ಸರ ಕಳುವಾಗಿದೆ ಎಂದು ಶಾಂತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















