ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MAY 2024
BHADRAVATHI : ಹಳೇನಗರದ ಕಂಚಿನಬಾಗಿಲು ಶ್ರೀ ಆಂಜನೇಯಸ್ವಾಮಿ ದೇವರ ಮಹಾ ರಥೋತ್ಸವವು (Ratotsava) ವೈಭವದಿಂದ ನಡೆಯಿತು. ರಥೋತ್ಸವ ಅಂಗವಾಗಿ ಮೂಲ ದೇವರಿಗೆ ಅಭಿಷೇಕ ನಂತರ ವಿಶೇಷ ಅಲಂಕಾರ ಮಾಡಲಾಯಿತು.
ಚಂದ್ರಶೇಖರ ಉಡುಪ ಮತ್ತು ದೇವಾಲಯದ ಪ್ರಧಾನ ಅರ್ಚಕ ಪವನಕುಮಾರ್ ಅವರ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು ನಡೆಯಿತು. ಆಂಜನೇಯಸ್ವಾಮಿಯ ರಜತ ಉತ್ಸವ ಮೂರ್ತಿಯನ್ನು ದೇವಾಲಯದ ಪ್ರಾಕಾರದಲ್ಲಿ ಮಂಗಳವಾದ್ಯ ಸಹಿತವಾಗಿ ಪ್ರದಕ್ಷಿಣೆ ಮಾಡಿ, ನಂತರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ರಾಜಬೀದಿ ಉತ್ಸವದ ಮೂಲಕ ಹಳೇನಗರದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ಸಲ್ಲಿಸಲಾಯಿತು. ಪೂಜೆ ನಂತರ ಪುನಾ ಅದೇ ಮಾರ್ಗದಲ್ಲಿ ಬಂದು ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತಾದಿಗಳಿಗೆ ತೀರ್ಥಪ್ರಸಾದ, ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯ ಸಮಿತಿ ಕೆ.ನರಸಿಂಹಮೂರ್ತಿ ಪದಾಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ – ವಿದೇಶಕ್ಕೆ ತೆರಳಲು ಸಿದ್ಧವಾಗಿದ್ದ ಶಿವಮೊಗ್ಗದ ಪ್ರೊಫೆಸರ್ಗೆ ಲಕ್ಷ ಲಕ್ಷ ವಂಚನೆ, ಆಗಿದ್ದೇನು?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















