ಶಿವಮೊಗ್ಗದಲ್ಲಿ ಮತ ಎಣಿಕೆ ಮುಕ್ತಾಯ, ಕಳೆದ ಬಾರಿಗಿಂತಲು ರಾಘವೇಂದ್ರಗೆ ಹೆಚ್ಚು ಮತ, ಹೆಚ್ಚು ಲೀಡ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 4 JUNE 2024

RESULT NEWS : ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ಮುಗಿದಿದೆ (Counting Complete). ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕಳೆದ ಲೋಕಸಭೆ ಚುನಾವಣೆಗಿಂತಲು ಹೆಚ್ಚು ಮತ ಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಕಳೆದ ಬಾರಿ ಮಧು ಬಂಗಾರಪ್ಪ ಪಡೆದಿದ್ದಕ್ಕಿಂತಲು ಹೆಚ್ಚು ಮತ ಸಂಪಾದಿಸಿದ್ದಾರೆ.

ಬಿ.ವೈ.ರಾಘವೇಂದ್ರ 7,78,721 ಮತ ಪಡೆದಿದ್ದಾರೆ. 2019ರಲ್ಲಿ ರಾಘವೇಂದ್ರ 7,29,872 ಮತ ಗಳಿಸಿದ್ದರು. ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 5,06,512 ಪಡೆದಿದ್ದರು. ಈಗ ಗೀತಾ ಶಿವರಾಜ್‌ ಕುಮಾರ್‌ 5,33,622 ಮತ ಪಡೆದಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಎಣಿಕೆ ಕೇಂದ್ರದ ಮುಂದೆ ಕೊಬ್ಬರಿ ಹಾರ ತಂದು ಸಂಭ್ರಮಾಚರಣೆ

ಬಿ.ವೈ.ರಾಘವೇಂದ್ರ ಅವರ ಗೆಲುವಿನ ಅಂತರವು ಹೆಚ್ಚಳವಾಗಿದೆ. ಕಳೆದ ಬಾರಿ 2,23,360 ಮತಗಳ ಅಂತರದಲ್ಲಿ ಗೆದ್ದಿದ್ದರು. ಈ ಬಾರಿ 2,42,109 ಅಂತರದಿಂದ ಗೆಲುವು ಸಾಧಿಸಿದ್ದಾರೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment