ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JUNE 2024
RESULT NEWS : ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕ್ಷೇತ್ರದಾದ್ಯಂತ ಸಂಭ್ರಮಾಚರಣೆ (Celebration) ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು.
ಎಲ್ಲೆಲ್ಲಿ ಹೇಗಿತ್ತು ಸಂಭ್ರಮ?
ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಭಜದ ಮೇಲೆ ಕೂರಿಸಿಕೊಂಡು ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಬಳಿಕ ಅಲಂಕೃತ ವಾಹನದಲ್ಲಿ ರಾಘವೇಂದ್ರ ಅವರ ಮೆರವಣಿಗೆ ಮಾಡಿದರು. ಇದೇ ವೇಳೆ ಡೊಳ್ಳಿನ ಶಬ್ದಕ್ಕೆ ಕಾರ್ಯಕರ್ತರು ಹೆಜ್ಜೆ ಹಾಕಿದರು.
ತಾಲೂಕುಗಳಲ್ಲಿ ಸಂಭ್ರಮಾಚಾರಣೆ
ಸಾಗರದ ಹೊಟೇಲ್ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಆನಂದಪುರದ ಮುಖ್ಯ ಬಸ್ ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶಿರಾಳಕೊಪ್ಪ ಬಸ್ ನಿಲ್ದಾಣ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಸೊರಬದ ಶ್ರೀ ರಂಗನಾಥ ದೇವಸ್ಥಾನದ ಆವರಣದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೆ ಗೆದ್ದು 2 ದಾಖಲೆ ನಿರ್ಮಿಸಿದ ಬಿ.ವೈ.ರಾಘವೇಂದ್ರ, ಏನೇನದು?
ಹೊಳೆಹೊನ್ನೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಹೊಸನಗರದ ಖಾಸಗಿ ಬಸ್ ನಿಲ್ದಾಣದ ಮುಂದೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಇದನ್ನೂ ಓದಿ – ‘ಹೋಗಿಬರಲಿ ಟಾಟಾ..!ʼ ಮಧು, ನಟ ಶಿವರಾಜ್ ಕುಮಾರ್, ಗೀತಾಗೆ ಫೇಸ್‌ಬುಕ್‌ನಲ್ಲಿ ಕುಮಾರ್ ಟಕ್ಕರ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















