ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ, ಸಾಗರದಲ್ಲಿ ಅಟೆಂಡರ್‌ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JUNE 2024

SAGARA : ವ್ಯಕ್ತಿಯೊಬ್ಬರಿಂದ ಲಂಚ ಪಡೆಯುವಾಗ ತಾಲೂಕು ಕಚೇರಿಯ ಅಟೆಂಡರ್‌ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಸಾಗರ ತಾಲೂಕು ಕಚೇರಿಯ ದಾಖಲಾತಿ ವಿಭಾಗದ ಆರ್‌.ಆರ್‌.ಟಿ ಶಾಖೆಯ ಅಟೆಂಡರ್‌ (Attender) ಬಸವರಾಜ್‌ ಲೋಕಾಯುಕ್ತ ಬಲೆಗೆ ಬಿದ್ದಾತ.

ಏನಿದು ಪ್ರಕರಣ?

ಸಾಗರದ ಬಳಸಗೋಡು ಗ್ರಾಮದಲ್ಲಿ ತೋಹಿದ್‌ ಅಬ್ದುಲ್‌ ಎಂಬುವವರಿಗೆ ಸೇರಿದ ಜಮೀನಿನ ಆರ್‌.ಟಿ.ಸಿ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು. ಅವರ ಸ್ನೇಹಿತ ಅಸೀಬ್‌ ಎಂಬುವವರು ತಾಲೂಕು ಕಚೇರಿಗೆ ತೆರಳಿ ಅಟೆಂಡರ್‌ ಬಸವರಾಜ್‌ ಅವರ ಆರ್‌ಟಿಸಿಗೆ ಬೇಡಿಕೆ ಇಟ್ಟಿದ್ದರು. ಆಗ ಬಸವರಾಜು 1500 ರೂ. ಹಣ ಪಡೆದಿದ್ದರು. ಅಸೀಬ್‌ ಅವರ ಸ್ನೇಹಿತ ನವೀನ್‌ ಎಂಬುವವರು ಇದನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದರು. ದಾಖಲೆ ಒದಗಿಸಿದಾಗ ಶಿರಸ್ತೇದಾರ್‌ ಸಹಿ ಇರಲಿಲ್ಲ. ಇದನ್ನು ಹಾಕಿಸಿಕೊಡಲು 2000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಇವತ್ತು ಅಟೆಂಡರ್‌ ಬಸವರಾಜು 2000 ಸಾವಿರ ರೂ. ನಗದು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣವನ್ನು ವಶಕ್ಕೆ ಪಡೆದು ಅಟೆಂಡರ್‌ ಬಸವರಾಜುನನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತ ಅಧೀಕ್ಷಕ ಮಂಜುನಾಥ ಚೌದರಿ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿ ದಾಳಿ ನಡೆಸಲಾಗಿದೆ. ಡಿವೈಎಸ್‌ಪಿ ಉಮೇಶ್‌ ಈಶ್ವರ ನಾಯ್ಕ, ಇನ್ಸ್‌ಪೆಕ್ಟರ್‌ ಹೆಚ್.ಎಸ್.ಸುರೇಶ್‌, ಸಿಬ್ಬಂದಿ ಯೋಗೇಶ್‌, ಸುರೇಂದ್ರ, ಚನ್ನೇಶ, ರಘುನಾಯ್ಕ, ಪುಟ್ಟಮ್ಮ, ಗಂಗಾಧರ, ಪ್ರದೀಪ್‌, ಜಯಂತ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.‌

ಇದನ್ನೂ ಓದಿ – ಮತ ಎಣಿಕೆ ಆರಂಭ, ಇವತ್ತು ನಿರ್ಧಾರವಾಗುತ್ತೆ ಡಾ.ಸರ್ಜಿ, ಆಯನೂರು, ದಿನೇಶ್‌, ರಘಪತಿ ಭಟ್‌ ಭವಿಷ್ಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 6, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment