ಮಲೆನಾಡು, ಕರಾವಳಿಯಲ್ಲಿ ಜೂನ್‌ ಮೊದಲ ವಾರ ಮಳೆ ಕೊರತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 JUNE 2024

RAINFALL NEWS : ಪೂರ್ವ ಮುಂಗಾರು (Monsoon) ಅವಧಿಯಲ್ಲಿ ರಾಜ್ಯದಲ್ಲಿ ಶೇ.31ರಷ್ಟು ಹೆಚ್ಚುವರಿ ಮಳೆಯಾಗಿದೆ. ಮುಂಗಾರು ಅವಧಿಯಲ್ಲಿ ಮಲೆನಾಡು ಮತ್ತು ಕರಾವಳಿಯ ಭಾಗದಲ್ಲಿ ಮಳೆ ಕೊರತೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.

ವಾಡಿಕೆಗಿಂತಲು ಹೆಚ್ಚು ಮಳೆ

ಮಾರ್ಚ್‌ 1 ರಿಂದ ಮೇ 31ರವರೆಗೆ ಪೂರ್ವ ಮುಂಗಾರು ಅವಧಿ ಎಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ 115 ಮಿ.ಮೀ ಮಳೆಯಾಗಬೇಕಿತ್ತು. ಈ ಬಾರಿ 151 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈ ಅವಧಿಯಲ್ಲಿ ವಾಡಿಕೆ ಮಳೆ 127 ಮಿ.ಮೀ. ಈ ಬಾರಿ 180 ಮಿ.ಮೀ ಮಳೆಯಾಗಿದೆ. ಶೇ.41ರಷ್ಟು ಹೆಚ್ಚು ಮಳೆಯಾಗಿದೆ.

ಮಲೆನಾಡು, ಕರಾವಳಿಯಲ್ಲಿ ಕೊರತೆ

ಇನ್ನು, ಜೂ.1 ರಿಂದ 7ರವರೆಗೆ ಮುಂಗಾರು ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 35 ಮಿ.ಮೀ ದಾಖಲಾಗಿದೆ. ಈ ಬಾರಿ 55 ಮಿ.ಮೀ ಮಳೆಯಾಗಿದೆ. ಶೇ. 57ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಇದೇ ಅವಧಿಯಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ದಕ್ಷಿಣ ಒಳನಾಡು ಭಾಗದಲ್ಲಿ ಜೂ.1 ರಿಂದ 7ರವರೆಗೆ ವಾಡಿಕೆ ಮಳೆ 23 ಮಿ.ಮೀ, ವಾಸ್ತವದಲ್ಲಿ ಸುರಿದಿರುವುದು 62 ಮಿ.ಮೀ. ಶೇ.171ರಷ್ಟು ಮಳೆ ಹೆಚ್ಚಳವಾಗಿದೆ. ಉತ್ತರ ಒಳಡನಾಡಿನಲ್ಲಿ ವಾಡಿಕೆ 24 ಮಿ.ಮೀ, ವಾಸ್ತವದಲ್ಲಿ 60 ಮಿ.ಮೀ ಮಳೆಯಾಗಿದೆ. ಶೇ.146ರಷ್ಟು ಹೆಚ್ಚು ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ವಾಡಿಕೆ 48 ಮಿ.ಮೀ, ವಾಸ್ತವದಲ್ಲಿ 32 ಮಿ.ಮೀ ಮಳೆಯಾಗಿದೆ. ಶೇ.32ರಷ್ಟು ಮಳೆ ಕೊರತೆಯಾಗಿದೆ. ಕರಾವಳಿಯಲ್ಲಿ ವಾಡಿಕೆ 105 ಮಿ.ಮೀ, ವಾಸ್ತವದಲ್ಲಿ 45 ಮಿ.ಮೀ ಮಳೆಯಾಗಿದೆ. ಶೇ.57ರಷ್ಟು ಮಳೆ ಕೊರತೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆ ಸಾಧ್ಯತೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ವರ್ಷಧಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment