ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 06 ಜುಲೈ 2019
ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ, ಭದ್ರಾವತಿಯಲ್ಲಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿತು. ಇನ್ನು, ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಎಬಿವಿಪಿ ಸಂಘಟನೆ ಹೆಸರಿಗೆ ಕಳಂಕ ತರುವಂತೆ ಮೆಸೇಜ್ ಪ್ರಕಟಿಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ತಹಶೀಲ್ದಾರ್ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸಿದ್ದಾರೆ. ಈ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಗೂ ಮೊದಲು ಭದ್ರಾವತಿಯ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಎಬಿವಿಪಿ ಪ್ರಮುಖರಾದ ಧನುಷ್, ರೇಷ್ಮ, ಸುಹಾಸಿನಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com