ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 JUNE 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SAGARA : ಮಳೆಗಾಲದಲ್ಲಿ (Rainy) ಸೇತುವೆ, ರಸ್ತೆ, ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾದರೆ ತಕ್ಷಣ ಫೋಟೊ ತೆಗೆದು ಕಳುಹಿಸಿ. ಸೂಕ್ತ ಸೌಲಭ್ಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮಳೆಗಾಲ ಮುಗಿಯುವ ತನಕ ಸಾಗರ ಮತ್ತು ಹೊಸನಗರ ತಾಲೂಕಿನ ಅಧಿಕಾರಿಗಳು ರಜೆ ಪಡೆಯುವಂತಿಲ್ಲ. ಮಳೆಯಿಂದ ಹಾನಿಯದರೆ ತಕ್ಷಣ ಫೋಟೊ ತೆಗೆದು ಕಳುಹಿಸಿ. ಶಾಲೆಗಳು ಸೋರುತ್ತಿದ್ದರೆ ತಕ್ಷಣ ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಸುರಕ್ಷಿತ ಸ್ಥಳದಲ್ಲಿ ಮಕ್ಕಳಿಗೆ ಪಾಠ ಮಾಡಬೇಕು. ಶಾಲೆಗಳ ದುರಸ್ಥಿಗೆ ವ್ಯವಸ್ಥೆ ಮಾಡುತ್ತೇನೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮಳೆಗಾಲದಲ್ಲಿ ರಸ್ತೆ ಕಾಮಗಾರಿ ಬೇಡ
ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಕಳೆದ ಎರಡು ತಿಂಗಳು ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯ ಕುಂಟಿತವಾಗಿದೆ. ಇನ್ಮುಂದೆ ಕಾಮಗಾರಿಗಳಿಗೆ ವೇಗ ಕೊಡಬೇಕು. ಆದರೆ ಮಳೆಗಾಲದಲ್ಲಿ ರಸ್ತೆ ಡಾಂಬರೀಕರಣ ಮಾಡುವಂತಿಲ್ಲ. ಜಿಲ್ಲಾ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.
ಡೆಂಗ್ಯು ಪ್ರಕರಣ ಉಲ್ಬಣವಾಗಬಾರದು
ಕ್ಷೇತ್ರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಾಗಿವೆ. ಈಗಾಗಲೆ ಹಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ ಕೊರತೆ ಉಂಟಾಗಿದೆ. ಹಾಗಾಗಿ ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಫಾಗಿಂಗ್ ಮಾಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ – ಜೋಗ ಜಲಪಾತಕ್ಕೆ ಜೀವ ಕಳೆ, ಮತ್ತಷ್ಟು ಮಳೆಯಾದರೆ ಮೈದುಂದಬಲಿವೆ ರಾಜ, ರಾಣಿ, ರೋರರ್, ರಾಕೆಟ್
ಮಾರ್ಕೆಟ್ ರಸ್ತೆ ಅಗಲೀಕರಣ ಕಾಮಗಾರಿಗೆ ಕ್ರಮ ಕೈಗೊಳ್ಳುವುದು ಸೇರಿದಂತೆ ಪ್ರಮುಖ ವಿಚಾರಗಳನ್ನು ಚರ್ಚಿಸಲಾಯಿತು. ತಹಶೀಲ್ದಾರ್ ಸೈಯದ್ ಕಲೀಮುಲ್ಲಾ, ತಾಲೂಕು ಪಂಚಾಯಿತಿ ಇಒ ಗುರುಕೃಷ್ಣ ಶೆಣೈ, ಡಿವೈಎಸ್‌ಪಿ ಗೋಪಾಲಕೃಷ್ಣ ನಾಯ್ಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಮುಂಗಾರು ಕುರಿತು ಹವಾಮಾನ ಇಲಾಖೆ ಮಹತ್ವದ ಮಾಹಿತಿ, ಇವತ್ತು ರಾಜ್ಯದ ವಿವಿಧೆಡೆ ಯೆಲ್ಲೋ ಅಲರ್ಟ್