ತೀರ್ಥಹಳ್ಳಿಯಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 JUNE 2024

THIRTHAHALLI : ಗಾಂಜಾ ದಂಧೆಕೋರರ ವಿರುದ್ಧ ಜಿಲ್ಲಾ ಪೊಲೀಸರು ಕ್ರಮ ಮುಂದುವರೆಸಿದ್ದಾರೆ. ಈ ಮಧ್ಯೆ ತೀರ್ಥಹಳ್ಳಿ ತಾಲೂಕಿನ ತೋಟವೊಂದರಲ್ಲಿ (Farm) ಅಡಿಕೆ ಮರಗಳ ಮಧ್ಯೆ ಗಾಂಜಾ ಬೆಳೆದಿರುವುದು ಬೆಳಕಿಗೆ ಬಂದಿದೆ.

ಹತ್ತಳ್ಳಿ ಗ್ರಾಮದ ಗುರುಮೂರ್ತಿ ಎಂಬಾತನಿಗೆ ಸೇರಿದ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ಸುತಾರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ಸಂದರ್ಭ 9 ಕೆ.ಜಿ. 524 ಗ್ರಾಂ ತೂಕದ 14 ಕೆ.ಜಿ. ಹಸಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 2.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ವಿರುದ್ಧ ಖಾಕಿ ಸಮರ

ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ದಂಧೆಕೋರರ ವಿರುದ್ಧ ಪೊಲೀಸರು ನಿರಂತರ ದಾಳಿ ನಡೆಸಲಾಗುತ್ತಿದೆ. ಗಾಂಜಾ ಮಾರಾಟ ಮಟ್ಟ ಹಾಕುವ ಗುರಿಯೊಂದಿಗೆ ಮಾಹಿತಿ ದೊರೆತಲ್ಲಿ ದಾಳಿ ನಡೆಸಲಾಗುತ್ತಿದೆ. ಗಾಂಜಾ ಕುರಿತು ಸಾರ್ವಜನಿಕರಿಗೆ 112ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಥಂಡಿ ವಾತಾವರಣ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment