ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 JUNE 2024
ANANDAPURA : ಮನೆಯಲ್ಲಿ ಯಾರೂ ಇಲ್ಲದಾಗ ಬಾಗಿಲಿನ ಇಂಟರ್ ಲಾಕ್ (interlock) ಮುರಿದು ಬಂಗಾರ ಮತ್ತು ಹಣವನ್ನು ಕಳವು ಮಾಡಿದ ಘಟನೆ ಅಂದಾಸುರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ಅವರು ಅಂದಾಸುರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪದೋನ್ನತಿ ಮೇರೆಗೆ ಅವರಿಗೆ ಮಣಿಪಾಲಕ್ಕೆ ವರ್ಗಾವಣೆಯಾಗಿತ್ತು.
ಶನಿವಾರ ಮಣಿಪಾಲಕ್ಕೆ ಕರ್ತವ್ಯಕ್ಕೆ ಹಾಜರಾಗಿದ್ದು, ಮನೆಯನ್ನು ಇನ್ನೂ ಖಾಲಿ ಮಾಡಿರಲಿಲ್ಲ. ಬೀರುವಿನಲ್ಲಿ ಇಟ್ಟಿದ್ದ 330 ಗ್ರಾಂ ಬಂಗಾರ ಮತ್ತು 90 ಸಾವಿರ ರೂ. ಕಳ್ಳತನವಾಗಿದೆ ಎಂದು ಅಬ್ದುಲ್ ಅಹಮದ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಚುನಾವಣೆಗೆ ಸಹಾಯ ಮಾಡಲಿಲ್ಲ ಅಂತಾ ಕೊಲೆ, ಶಿವಮೊಗ್ಗದಲ್ಲಿ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಏನಿದು ಕೇಸ್?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















