SHIVAMOGGA LIVE NEWS | 16 JUNE 2024
SHIMOGA : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಿರೀಕ್ಷೆ ಹುಸಿಯಾಗಿದೆ. ಪೆಟ್ರೋಲ್, ಡಿಸೇಲ್ ದರ (Petrol) ಹೆಚ್ಚಳ ಮಾಡಿ ರಾಜಕೀಯ ದ್ವೇಷ ತೀರಿಸಿಕೊಳ್ಳಲಾಗುತ್ತಿದೆ. ಇದು ಮಧ್ಯಮ ವರ್ಗ, ರೈತರ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.
![]() |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು, ಯಂತ್ರೋಪಕರಣಕ್ಕೆ ಇಂಧನ ಅವಶ್ಯಕ. ಈಗ ಇಂಧನ ದರ ಹೆಚ್ಚಳದಿಂದ ರೈತರಿಗೆ ಹೊರೆಯಾಗಲಿದೆ. ಕರಾವಳಿಯಲ್ಲಿ ಮೀನುಗಾರರಿಗು ಸಮಸ್ಯೆಯಾಗಲಿದೆ. ಡಿಸೇಲ್ ದರ ಹೆಚ್ಚಳದ ಪರಿಣಾಮ ಕೆಎಸ್ಆರ್ಟಿಸಿ ಟಿಕೆಟ್ ದರ ಪರಿಷ್ಕರಿಸಲಿದೆ ಎಂದು ಟೀಕಿಸಿದರು.
ನಿರೀಕ್ಷೆ ಹುಸಿಯಾದ ಬೆನ್ನಿಗೆ ಕಾಂಗ್ರೆಸ್ ಪಕ್ಷದವರು ರಾಜ್ಯದ ಜನರ ಕುರಿತು ಹಗುರವಾಗಿ ಮಾತನಾಡುತ್ತಿದ್ದಾರೆ. ಗ್ಯಾರಂಟಿಗಳ ಲಾಭ ಪಡೆದು ಬಿಜೆಪಿಗೆ ಮತ ನೀಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಈ ಯೋಜನೆಗಳನ್ನು ತಮ್ಮ ಕೈಯಿಂದ ಕೊಡುತ್ತಿರುವಂತೆ ಕೆಲವು ಕಾಂಗ್ರೆಸ್ ನಾಯಕರು ವರ್ತಿಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿಲ್ಲ. ಅಂಗನವಾಡಿಗಳ ಬಾಡಿಗೆ ಪಾವತಿಸಿಲ್ಲ, ಅಲ್ಲಿ ಕೆಲಸ ಮಾಡುವವರಿಗೆ ವೇತನೆ ನೀಡಿಲ್ಲ ಎಂದು ರಾಘವೇಂದ್ರ ಆರೋಪಿಸಿದರು.
ತಮಟೆ ಬಾರಿಸಿ ಪ್ರತಿಭಟನೆ
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ಈ ಹಿನ್ನೆಲೆ ಪಟ್ರೋಲ್, ಡಿಸೇಲ್ ದರ ಹೆಚ್ಚಳ ಮಾಡಲಾಗಿದೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ. ಸೋಮವಾರ ಬೆಳಗ್ಗೆ ಶಿವಮೊಗ್ಗದ ಗೋಪಿ ವೃತ್ತದಲ್ಲಿ ತಮಟೆ ಬಾರಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಇದನ್ನೂ ಓದಿ – ಕರ್ನಾಟಕದಲ್ಲಿ ಪೆಟ್ರೋಲ್, ಡಿಸೇಲ್ ದರ ಹೆಚ್ಚಳ, ಶಿವಮೊಗ್ಗದಲ್ಲಿ ಎಷ್ಟಾಗಿದೆ ರೇಟ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200