ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JUNE 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ವಾರದಿಂದ ಮಳೆ (Rain) ಮಾಯವಾಗಿದೆ. ರೈತರಲ್ಲಿ ಆತಂಕ ಮೂಡಿಸಿದೆ.
ಪೂರ್ವ ಮುಂಗಾರು ಚುರುಕು
ಶಿವಮೊಗ್ಗ ಜಿಲ್ಲೆಯಲ್ಲಿ ವಾರ್ಷಿಕ ಸರಾಸರಿ 2325 ಮಿ.ಮೀ ಮಳೆಯಾಗಲಿದೆ. ಕಳೆದ ವರ್ಷ ಮಳೆ ಕೊರತೆಯಿಂದ ಬರಗಾಲ ಆವರಿಸಿತ್ತು. ಜಿಲ್ಲೆಯ ಏಳು ತಾಲೂಕುಗಳು ತೀವ್ರ ಬರಪೀಡತ ಎಂದು ಘೋಷಿಸಲಾಗಿತ್ತು. ಈ ಬಾರಿ ಉತ್ತಮ ಮುಂಗಾರು ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದರು. ಅದಕ್ಕೆ ಪುಷ್ಠಿ ನೀಡುವಂತೆ, ಪೂರ್ವ ಮುಂಗಾರು ಅಬ್ಬರ ಜೋರಾಗಿತ್ತು.
2024ರ ಜನವರಿ 1 ರಿಂದ ಮೇ 31ರವರೆಗೆ ವಾಡಿಕೆಗಿಂತಲು ಶೇ.56ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 129 ಮಿ.ಮೀ. ಈ ಬಾರಿ ಆಗಿರುವ ಮಳೆ 201 ಮಿ.ಮೀ. ಇದು ರೈತರಿಗೆ ತುಸು ನೆಮ್ಮದಿ ಮೂಡಿಸಿತ್ತು.
ಮುಂಗಾರು ಮಳೆ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮತ್ತು ಹವಾಮಾನ ತಜ್ಞರು ಅಭಿಪ್ರಯಪಟ್ಟಿದ್ದರು. ಆದರೆ ಕಳೆದ ಒಂದು ವಾರದಿಂದ ಮಳೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ – ಹೊಸನಗರದ ಬೆಕ್ಕೋಡಿಯಲ್ಲಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು