ಶಿವಮೊಗ್ಗದಲ್ಲಿ ಇವತ್ತೂ ಬಿಸಿಲು ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JUNE 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಪುನಃ ಬೇಸಿಗೆಯಂತಹ ಬಿಸಿಲು ಆವರಿಸಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 20 ಡಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ.

ಬೆಳಗ್ಗೆ 8ಕ್ಕೆ 25.4 ಡಿಗ್ರಿ, ಬೆಳಗ್ಗೆ 10ಕ್ಕೆ 28.3 ಡಿಗ್ರಿ, ಮಧ್ಯಾಹ್ನ 12ಕ್ಕೆ 30.5 ಡಿಗ್ರಿ, ಮಧ್ಯಾಹ್ನ 2ಕ್ಕೆ 29.7 ಡಿಗ್ರಿ, ಸಂಜೆ 4ಕ್ಕೆ28.5 ಡಿಗ್ರಿ, ಸಂಜೆ 6ಕ್ಕೆ 26.3 ಡಿಗ್ರಿ, ರಾತ್ರಿ 8ಕ್ಕೆ 24 ಡಿಗ್ರಿ, ರಾತ್ರಿ 10ಕ್ಕೆ 22.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಭದ್ರಾವತಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್.‌ ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 24 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಭದ್ರಾವತಿಯಲ್ಲಿ ಪೊಲೀಸ್‌ ದಾಳಿ, ಕಾರು ಸಹಿತ ಓರ್ವ ಅರಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment