ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JUNE 2024
NR PURA : ಭದ್ರಾ ಹಿನ್ನೀರಿನಲ್ಲಿ (Backwater) ಮುಳುಗಿ ಶಿವಮೊಗ್ಗದ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ ವಿದ್ಯಾನಗರದವರು ಎನ್ನಲಾದ ಆದಿಲ್, ಸಾಜಿದ್, ಅಫ್ದಾ ಖಾನ್ ನಾಪತ್ತೆಯಾದವರು.
ಶಿವಮೊಗ್ಗ ವಿದ್ಯಾನಗರದ ನಾಲ್ವರು ಯುವಕರು ಭದ್ರಾ ಹಿನ್ನೀರಿಗೆ ಬಂದಿದ್ದರು. ಮೂವರು ಯುವಕರು ಉಕ್ಕಡದಲ್ಲಿ (ಮೀನು ಹಿಡಿಯಲು ಬಳಸುವ ಸಣ್ಣ ದೋಣಿ) ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಉಕ್ಕಡ ಮಗುಚಿ ಮೂವರು ನೀರುಪಾಲಾಗಿದ್ದಾರೆ. ರಾತ್ರಿವರೆಗೆ ಶೋಧ ಕಾರ್ಯ ನಡೆಸಲಾಯಿತು. ಆದರೆ ಮೂವರು ಪತ್ತೆಯಾಗದ ಹಿನ್ನೆಲೆ ಇವತ್ತು ಬೆಳಗ್ಗೆಯಿಂದ ಪುನಃ ಶೋಧ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಪೊಲೀಸ್ ದಾಳಿ, ಕಾರು ಸಹಿತ ಓರ್ವ ಅರಸ್ಟ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















