ಮಳೆಯಿಂದಾಗಿ ತಂಪಾಯ್ತು ಶಿವಮೊಗ್ಗ, ಇವತ್ತು ಜಿಲ್ಲೆಯಲ್ಲಿ ಎಷ್ಟಿರುತ್ತೆ ತಾಪಮಾನ?

SHIVAMOGGA LIVE NEWS | 24 JUNE 2024 (ಈ ಸುದ್ದಿಯನ್ನು ಇನ್ನು 58 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆಯಾಗಿದೆ. ಇವತ್ತೂ ಕೂಡ ಮಳೆಯಾಗುತ್ತಿದೆ. ಹಾಗಾಗಿ ತಂಪು ವಾತಾವರಣ ಇದೆ. ಇನ್ನು, ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ.

ಬೆಳಗ್ಗೆ 7 ಗಂಟೆಗೆ ಶಿವಮೊಗ್ಗದಲ್ಲಿ 22.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 10ಕ್ಕೆ 23.2 ಡಿಗ್ರಿ, ಮಧ್ಯಾಹ್ನ 12ಕ್ಕೆ 22.5 ಡಿಗ್ರಿ, ಮಧ್ಯಾಹ್ನ 2ಕ್ಕೆ 23.2 ಡಿಗ್ರಿ, ಸಂಜೆ 5ಕ್ಕೆ 22.6 ಡಿಗ್ರಿ, ರಾತ್ರಿ 8ಕ್ಕೆ 21.1 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Rainfall-in-Shimoga-city.

ಇದನ್ನೂ ಓದಿ – ಯಡೂರು ಸಮೀಪ ಅಬ್ಬಿ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು, ಯುವಕ ನೀರುಪಾಲು

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಭದ್ರಾವತಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್.‌ ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಾದ್ಯಂತ ಇವತ್ತು ಅಲ್ಲಲ್ಲಿ ಕೆಲ ಹೊತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ – ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ಭೀಕರ ಅಪಘಾತ, ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾದ ಯುವಕ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment