ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 JUNE 2024
SHIMOGA : ಕೇಬಲ್ ವಯರ್ ಅಳವಡಿಸುತ್ತಿದ್ದ ಟೆಕ್ನಿಷಿಯನ್ (technician) ಮೇಲೆ ಅಪರಿಚಿತರು ದಾಳಿ ಮಾಡಿ, ಗಾಯಗೊಳಿಸಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಇದೇ ವೇಳೆ ಮತ್ತೊಬ್ಬ ವ್ಯಕ್ತಿಯಿಂದ ನಗದು ಕಸಿದುಕೊಂಡು ಹೋಗಿದ್ದಾರೆ.
ಶಿವಮೊಗ್ಗದ ಟೆಂಪೊ ಸ್ಟಾಂಡ್ ಬಳಿ ರಾತ್ರಿ 1.30ರ ಹೊತ್ತಿಗೆ ಕೇಬಲ್ ವೈಯರ್ ಅಳವಡಿಸುವ ಕಾರ್ಯ ನಡೆಯುತ್ತಿತ್ತು. ಟೆಕ್ನಿಷಿಯನ್ ಮಾರ್ಕ್ ಎಂಬಾತ ಕೆಲಸ ಮಾಡುತ್ತಿದ್ದ ವೇಳೆ ಬೈಪಾಸ್ ರಸ್ತೆಯಿಂದ ಒಂದೇ ಬೈಕ್ನಲ್ಲಿ ಬಂದ ಮೂವರು ವಿಳಾಸ ಕೇಳಿದ್ದರು. ತನಗೆ ವಿಳಾಸ ಗೊತ್ತಿಲ್ಲ ಎಂದು ಮಾರ್ಕ್ ತಿಳಿಸಿದ್ದಾನೆ. ಆಗ ಬೈಕ್ನಲ್ಲಿದ್ದವರು ಮಾರ್ಕ್ ಕೈಯಲ್ಲಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ.
ಈ ಮೇಳೆ ಮಾರ್ಕ್ ಮೇಲೆ ಹಲ್ಲೆ ನಡೆಸಿದ್ದು ತಲೆ ಮತ್ತು ದವಡೆಗೆ ಹೊಡೆದು ಗಾಯಗೊಳಿಸಿದ್ದಾರೆ. ದೂರದಲ್ಲಿದ್ದ ಸಹೋದ್ಯೋಗಿಗಳು ನೆರವಿಗೆ ಧಾವಿಸುತ್ತಿದ್ದಂತೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇದೇ ವೇಳೆ ಕುಂಬಾರ ಗುಂಡಿ ನಿವಾಸಿ ವಿಜಯ್ ಟಿಕಾರ್ ಎಂಬುವವರನ್ನು ಅಡ್ಡಗಟ್ಟಿ 1500 ರೂ. ನಗದು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕಾರು ಡಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್ ಕಂಬ, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















